Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...