Homeಕರ್ನಾಟಕಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಪಾಠಕ್ಕೆ ಕತ್ತರಿ ಹಾಕಲು ಸರ್ಕಾರದ ಚಿಂತನೆ..!?

ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಪಾಠಕ್ಕೆ ಕತ್ತರಿ ಹಾಕಲು ಸರ್ಕಾರದ ಚಿಂತನೆ..!?

- Advertisement -
- Advertisement -

ಟಿಪ್ಪು ಜಯಂತಿಯನ್ನು ಬಿಜೆಪಿ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ಈ ಬಾರಿ ಟಿಪ್ಪು ಜಯಂತಿಯನ್ನು ಆಚರಿಸುವುದಿಲ್ಲ ಎಂದು ಘೋಷಿಸಿದೆ. ಅಷ್ಟೇ ಅಲ್ಲದೇ ಈಗ ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತ ಪಾಠಕ್ಕೂ ಕತ್ತರಿ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್‍ಕುಮಾರ್, ಟಿಪ್ಪು ಜಯಂತಿಗೆ ಹಿಂದಿನಿಂದಲೂ ಸಾಕಷ್ಟು ವಿರೋಧವಿದ್ದು, ವಾದ-ವಿವಾದಗಳಿಗೆ ಜಯಂತಿ ಎಡೆಮಾಡಿ ಕೊಟ್ಟಿದೆ. ಬಿಜೆಪಿ ಶಾಸಕ ಅಪ್ಪಚ್ಚುರಂಜನ್ ಅವರು ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ಕೈ ಬಿಡುವಂತೆ ಪತ್ರ ಬರೆದಿದ್ದಾರೆ. ಆದರೆ ಪತ್ರ ಇನ್ನೂ ಕೈಸೇರಿಲ್ಲ. ಪತ್ರ ತಲುಪಿದ ಬಳಿಕ ಸೂಕ್ತ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಟಿಪ್ಪು ಸುಲ್ತಾನ್ ಒಬ್ಬ ಕ್ರೂರಿ, ಹಿಂದೂಗಳ ಮೇಲೆ ಅಕ್ರಮಣಕಾರಿ ಧೋರಣೆ ಅನುಸರಿಸಿದವನು. ಅಂಥವನ ಜಯಂತಿ ಆಚರಿಸುತ್ತಿರುವುದು ಏಕೆ..? ಎಂಬ ಆಕ್ರೋಶ ವ್ಯಕ್ತವಾಗಿತ್ತು. ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಹಲವು ಕಡೆಗಳಲ್ಲಿ ಟಿಪ್ಪು ಸುಲ್ತಾನ್ ಆಕ್ರಮಣ ನಡೆಸಿದ್ದ. ಹೀಗಾಗಿ ಅಲ್ಲಿನ ಜನತೆ ಶೋಷಣೆಗೆ ಒಳಗಾಗಿದ್ದರು. ದಮನಕಾರಿ ಆಡಳಿತ ನಡೆಸಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಈ ಭಾಗಗಳ ಜನತೆ ವಿರೋಧಿಸುತ್ತಿದ್ದಾರೆ. ಆದರೆ ಹಿಂದಿನ ಸರ್ಕಾರಗಳು ವಿರೋಧದ ನಡುವೆಯೂ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದವು ಎಂದು ಸುರೇಶ್‌ ಕುಮಾರ್‌ರವರು ಆರೋಪಿಸಿದ್ದಾರೆ.

ಇನ್ನು ಟಿಪ್ಪು ಸುಲ್ತಾನ್‍ನಿಂದ ಪ್ರೇರಣೆ, ಪಾಠ ಕಲಿಯುವಂಥದ್ದು ಏನಿದೆ..? ಅಂತಹ ಪರಿಸ್ಥಿತಿ ಇಲ್ಲ. ದಿ.ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಸಂತ ಶಿಶುನಾಳ ಷರೀಫ್ ಅವರಂತಹ ಮಹಾನ್ ನಾಯಕರ ಜಯಂತಿ ಆಚರಿಸಿದರೆ ಮಕ್ಕಳು ಉತ್ತಮ ಪಾಠ ಕಲಿಯಲು ಪ್ರೇರಣೆ ದೊರೆಯುತ್ತದೆ. ಟಿಪ್ಪು ಜಯಂತಿ ಮತ್ತು ಟಿಪ್ಪು ಕುರಿತ ಪಾಠಕ್ಕೆ ಖಂಡನೆ ವ್ಯಕ್ತವಾಗಿದೆ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಜಾರಿಗೆ ತಂದಿತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲೂ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಯಿತು. ಆದರೆ ಬಿಜೆಪಿ, ಆರ್‌ಎಸ್‍ಎಸ್ ಟಿಪ್ಪು ಜಯಂತಿಯನ್ನು ಬಲವಾಗಿ ವಿರೋಧಿಸುತ್ತಲೇ ಇವೆ. ಟಿಪ್ಪು ಜಯಂತಿ ಆಚರಣೆ ತಡೆಗೆ ಬಿಜೆಪಿ ಹರಸಾಹಸ ನಡೆಸಿತ್ತು. ಈ ಮಧ್ಯೆ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಟಿಪ್ಪು ಜಯಂತಿ ಮತ್ತು ಪಾಠಗಳಿಗೆ ಕತ್ತರಿ ಹಾಕಲು ಮುಂದಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...