Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...