Homeಕರ್ನಾಟಕಟಿಪ್ಪು ಈ ದೇಶದ ಇತಿಹಾಸದ ಭಾಗ, ಪಠ್ಯದಿಂದ ಕೈಬಿಡುವುದು ಸರಿಯಲ್ಲ: ಡಿಕೆಶಿ

ಟಿಪ್ಪು ಈ ದೇಶದ ಇತಿಹಾಸದ ಭಾಗ, ಪಠ್ಯದಿಂದ ಕೈಬಿಡುವುದು ಸರಿಯಲ್ಲ: ಡಿಕೆಶಿ

- Advertisement -
- Advertisement -

ಟಿಪ್ಪು ಸುಲ್ತಾನ್ ಈ ದೇಶದ ಇತಿಹಾಸದ ಭಾಗವಾಗಿದ್ದಾರೆ. ಅವರ ವಿಚಾರ ಒಂದು ಜಾತಿ, ವರ್ಗಕ್ಕೆ ಸೇರಿದಲ್ಲ. ಹಾಗಾಗಿ ಪಠ್ಯದಿಂದ ಟಿಪ್ಪು ಸುಲ್ತಾನ ಅಧ್ಯಾಯ ಕೈಬಿಡುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ಪಠ್ಯಪುಸ್ತಕಗಳಲ್ಲಿ ಹಲವು ವಿಚಾರಗಳನ್ನು ಕೈಬಿಡುತ್ತಿದೆ ಎಂದು ಆರೋಪಿಸಿದ್ದಾರೆ.

‘ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದು ಬಿಡುವುದು ಆ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರವರೆ ವಿಧಾನಸೌಧದ ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ. ಇವತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಅಂತಾ ಇತಿಹಾಸ ಬದಲಿಸಲು ಹೊರಟಿರುವುದು ಹಾಗೂ ಸಂವಿಧಾನವನ್ನು ತಿರುಚಿ ಬರೆಯಲು ಪ್ರಯತ್ನ ನಡೆಯುತ್ತಿರುವುದು ಖಂಡನೀಯ’ ಎಂದಿದ್ದಾರೆ.

ನಮ್ಮ ಇತಿಹಾಸ ಬದಲಾವಣೆ ಆಗಬಾರದು. ನಮ್ಮ ಸಂವಿಧಾನ ಉಳಿದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವು. ಬಿಜೆಪಿಯವರು ಜನರನ್ನು ದಾರಿ ತಪ್ಪಿಸಲು ನಾವು ಬಿಡುವುದಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.

ಟಿಪ್ಪು ಅಧ್ಯಾಯ ಕೈಬಿಡುವುದು ಒಂದು ವರ್ಗ, ಜಾತಿಗೆ ಸೀಮಿತವಾದುದಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಇದು ದೇಶದ ಚರಿತ್ರೆ ವಿಚಾರ. ಹಾಗಾಗಿ ಈ ವಿಚಾರದಲ್ಲಿನ ಸಾಧಕ ಬಾಧಕಗಳ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುತ್ತೇವೆ ಎಂದಿದ್ದಾರೆ.

ಜಗತ್ತಿನ ಹಲವು ರಾಷ್ಟ್ರಗಳು ಭಾರತದ ಸಂವಿಧಾನವನ್ನು ಪ್ರಶಂಸೆ ಮಾಡಿ ತಾವು ಅಳವಡಿಸಿಕೊಳ್ಳಬೇಕು ಎಂಬ ಇಂಗಿತ ವ್ಯಕ್ತಪಡಿಸಿವೆ. ಆದರೆ ಬಿಜೆಪಿ ಇದನ್ನು ಮೊಟಕು ಮಾಡಲು ಪ್ರಯತ್ನಿಸುತ್ತಿದೆ. ನಮ್ಮ ಮಕ್ಕಳಿಗೆ ಇದರ ಬಗ್ಗೆ ತಿಳುವಳಿಕೆ ಹೇಳಿಕೊಡಬೇಕು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...