Homeಮುಖಪುಟತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

ತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

- Advertisement -
- Advertisement -

ಬುಧವಾರ ರಾತ್ರಿ (ಜನವರಿ 8) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪವಿತ್ರ ಕಾರ್ಯಕ್ರಮದ ಟಿಕೆಟ್ ವಿತರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಭಕ್ತರ ಕುಟುಂಬಗಳಿಗೆ ಆಂಧ್ರ ಪ್ರದೇಶ ಸರ್ಕಾರ ಗುರುವಾರ (ಜನವರಿ 9) ತಲಾ ₹25 ಲಕ್ಷ ಪರಿಹಾರ ಘೋಷಿಸಿದೆ.

ಆಂಧ್ರ ಪ್ರದೇಶದ ಕಂದಾಯ ಸಚಿವ ಅನಗಣಿ ಸತ್ಯ ಪ್ರಸಾದ್, “ನಾವು ಜೀವವನ್ನು ಬೇರೆ ಯಾವುದರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಕುಟುಂಬಗಳಿಗೆ ಬೆಂಬಲ ನೀಡುತ್ತೇವೆ. ನಾವು ₹25 ಲಕ್ಷಗಳನ್ನು ಘೋಷಿಸಿದ್ದೇವೆ. ಮುಖ್ಯಮಂತ್ರಿ ಗಾಯಗೊಂಡ ಜನರೊಂದಿಗೆ ಮಾತನಾಡುತ್ತಾರೆ” ಎಂದು ಹೇಳಿದರು.

ಸಚಿವರ ತಂಡವು ರುಯಾ ಆಸ್ಪತ್ರೆಯಲ್ಲಿ ಮೃತರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಕಂದಾಯ ಸಚಿವ ಸತ್ಯ ಪ್ರಸಾದ್ ಈ ಘೋಷಣೆ ಮಾಡಿದರು. ಸಚಿವರಾದ ಅನಿತಾ, ಪಾರ್ಥಸಾರಥಿ ಮತ್ತು ಅನಮ್ ರಾಮನಾರಾಯಣ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಎಸ್‌ವಿಐಎಂಎಸ್‌ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿತು.

ಸಚಿವರು ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದರು. ಈ ಘಟನೆಯು ಯಾವುದೇ ಆತುರದ ಕ್ರಮ ಅಥವಾ ಸಮನ್ವಯದ ಕೊರತೆಯಿಂದ ಉಂಟಾಗಿದೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇದು ಅಪಘಾತವೋ ಅಥವಾ ಪಿತೂರಿಯೋ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವೆ ಅನಿತಾ ಹೇಳಿದರು.

ಸಿಸಿಟಿವಿ ದೃಶ್ಯಾವಳಿಗಳು ಯಾರ ತಪ್ಪುಗಳಿಂದ ಈ ದುರಂತ ಸಂಭವಿಸಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೃತರ ಶವಗಳನ್ನು ಶವಪರೀಕ್ಷೆಯ ನಂತರ ಆಯಾ ಪಟ್ಟಣಗಳಿಗೆ ಕಳುಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಮೃತರಲ್ಲಿ ಮೂವರು ವಿಶಾಖಪಟ್ಟಣಂನವರು ಮತ್ತು ಒಬ್ಬರು ನರಸಿಪಟ್ಟಣಂನವರು. ಉಳಿದ ಇಬ್ಬರು ಬಲಿಪಶುಗಳು ತಮಿಳುನಾಡು ಮತ್ತು ಕೇರಳದವರು.

ಜನವರಿ 10 ರಂದು ಪ್ರಾರಂಭವಾಗುವ ವಾರ್ಷಿಕ ವೈಕುಂಠ ಏಕಾದಶಿ ಉತ್ಸವದ ಸಮಯದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟೋಕನ್ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಕೌಂಟರ್‌ಗಳನ್ನು ಸ್ಥಾಪಿಸಿದ್ದ ತಿರುಪತಿಯ ವಿಷ್ಣು ನಿವಾಸಂ ದೇವಾಲಯದ ಬಳಿ ಕಾಲ್ತುಳಿತ ಸಂಭವಿಸಿದೆ.

10 ದಿನಗಳ ಈ ಕಾರ್ಯಕ್ರಮದಲ್ಲಿ, ಭಕ್ತರಿಗೆ ಉತ್ತರ ದ್ವಾರದ ಮೂಲಕ ದೇವರ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗುರುವಾರ ಬೆಳಿಗ್ಗೆ ಟೋಕನ್ ವಿತರಣೆ ಆರಂಭವಾಗಬೇಕಿದ್ದರೂ ಬುಧವಾರ ಸಂಜೆಯಿಂದಲೇ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಕೌಂಟರ್‌ಗಳಲ್ಲಿ ಸಾಲುಗಟ್ಟಿ ನಿಂತಿದ್ದರು. ತೊಂದರೆಗೀಡಾದ ಮಹಿಳೆಗೆ ಸಹಾಯ ಮಾಡಲು ಒಂದು ಗೇಟ್ ತೆರೆದಾಗ, ಭಕ್ತರು ಮುಂದೆ ದೌಡಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು.

ಹಬ್ಬದ ಮೊದಲ ಮೂರು ದಿನಗಳವರೆಗೆ (ಜನವರಿ 10–12) 1.20 ಲಕ್ಷ ಟೋಕನ್‌ಗಳ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿತ್ತು. ತಿರುಪತಿಯ 94 ಸ್ಥಳಗಳಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು.

ಇದನ್ನೂ ಓದಿ; ತಿರುಪತಿ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ; 40ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...