Homeಮುಖಪುಟತಿರುಪತಿ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ; 40ಕ್ಕೂ ಅಧಿಕ ಜನರಿಗೆ ಗಾಯ

ತಿರುಪತಿ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ; 40ಕ್ಕೂ ಅಧಿಕ ಜನರಿಗೆ ಗಾಯ

- Advertisement -
- Advertisement -

ತಿರುಪತಿಯ ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ (ಜ.8) ‘ವೈಕುಂಠ ದ್ವಾರ ದರ್ಶನ’ದ ಟೋಕನ್ ವಿತರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಟೋಕನ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಕಾರಣ, ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ವರದಿಗಳು ಹೇಳಿವೆ.

ಮೃತರನ್ನು ತಮಿಳುನಾಡು ಮೂಲದ ಮಲಿಕಾ (49), ಆಂಧ್ರ ಪ್ರದೇಶದ ರಜಿನಿ (47), ಶಾಂತಿ (40), ನಾಯ್ಡುಬಾಬು (51), ರಾಜೇಶ್ವರಿ (47) ಮತ್ತು ಅಲಗಾ ರಾಣಿ (42) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಭಕ್ತರು ಟೋಕನ್‌ಗಾಗಿ ಕಾಯುತ್ತಿದ್ದಾಗ ಗೇಟ್ ಒಂದನ್ನು ಹಠಾತ್ ತೆರೆಯಲಾಗಿದೆ. ಈ ವೇಳೆ ಎಲ್ಲರೂ ಆ ಕಡೆಗೆ ನುಗ್ಗಿದ್ದಾರೆ. ಇದರಿಂದ ನೂಕು ನುಗ್ಗಲು ಉಂಟಾಯಿತು. ಕೆಲವರು ಕಾಲ್ತುಳಿತಕ್ಕೆ ಸಿಲುಕಿ ಕೊನೆಯುಸಿರೆಳೆದರು ಎಂದು ವರದಿಗಳು ತಿಳಿಸಿವೆ.

ಸರತಿ ಸಾಲುಗಳಲ್ಲಿ ಭದ್ರತಾ ಕ್ರಮಗಳು ಅಸಮರ್ಪಕವಾಗಿತ್ತು. ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಗಳು ಗೈರಾಗಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಆರೋಪಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಆಘಾತ ವ್ಯಕ್ತಪಡಿಸಿದ್ದಾರೆ.

“ಆಂಧ್ರ ಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ತಿಳಿದು ನೋವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನಾವಿದ್ದೇವೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಆಂಧ್ರ ಪ್ರದೇಶ ಸರ್ಕಾರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ” ಎಂದು ಪ್ರಧಾನ ಮಂತ್ರಿಗಳ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆಯಲಾಗಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೂರವಾಣಿ ಕರೆ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ನಾಯ್ಡು ಆದೇಶಿಸಿದ್ದಾರೆ.

“ತಿರುಮಲ ಶ್ರೀವಾರಿ ವೈಕುಂಠ ದ್ವಾರಕ್ಕೆ ಭೇಟಿ ನೀಡಲು ಟೋಕನ್‌ಗಳಿಗಾಗಿ ತಿರುಪತಿಯ ವಿಷ್ಣು ನಿವಾಸದ ಬಳಿ ಕಾಯುತ್ತಿದ್ದಾಗ ನಡೆದ ಕಾಲ್ತುಳಿತದಲ್ಲಿ ಹಲವಾರು ಭಕ್ತರು ಸಾವನ್ನಪ್ಪಿದ್ದು ನನಗೆ ಆಘಾತವನ್ನುಂಟು ಮಾಡಿದೆ. ಟೋಕನ್‌ಗಳಿಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರಣ ನಡೆದ ಈ ದುರಂತ ಘಟನೆ ನನ್ನನ್ನು ತೀವ್ರವಾಗಿ ನೋಯಿಸಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಅವರ ಜೀವಗಳನ್ನು ಉಳಿಸಲು ಸ್ಥಳಕ್ಕೆ ಹೋಗಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾನು ಜಿಲ್ಲಾ ಮತ್ತು ಟಿಟಿಡಿ ಅಧಿಕಾರಿಗಳೊಂದಿಗೆ ಕಾಲಕಾಲಕ್ಕೆ ಮಾತನಾಡುತ್ತಿದ್ದೇನೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ” ಎಂದು ಚಂದ್ರಬಾಬು ನಾಯ್ಡು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

“ತಿರುಪತಿಯಲ್ಲಿ ಸಂಭವಿಸಿದ ದುರಂತ ಘಟನೆ ತೀವ್ರ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ನಾನು ಕೋರುತ್ತೇನೆ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಮಾಜಿ ಶಾಸಕ ಸೇರಿ ನಾಲ್ವರು ಅಪರಾಧಿಗಳ ಶಿಕ್ಷೆಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...