Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...