Homeಮುಖಪುಟನರೇಂದ್ರ ಮೋದಿಯನ್ನು 'ವಲಸೆ ರಾಜಕಾರಣಿ' ಎಂದ TMC!

ನರೇಂದ್ರ ಮೋದಿಯನ್ನು ‘ವಲಸೆ ರಾಜಕಾರಣಿ’ ಎಂದ TMC!

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

- Advertisement -
- Advertisement -

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿದ್ಯಾಲಯದ ಸಂಸ್ಥಾಪಕ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟಾಗೋರ್ ಅವರ ದೃಷ್ಟಿಕೋನ “ಆತ್ಮನಿರ್ಭರ ಭಾರತ” ಆಗಿತ್ತು ಎಂಬ ಹೇಳಿಕೆಗೆ, ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದ್ದು, “ವಲಸೆ ರಾಜಕಾರಣಿಗಳು ಟಾಗೋರ್ ಮತ್ತು ಅವರ ತತ್ವಗಳ ಬಗ್ಗೆ ಮಾತನಾಡುವ ಮೊದಲು ಅವರ ತತ್ತ್ವಶಾಸ್ತ್ರದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರಬೇಕು” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶ್ವ-ಭಾರತಿ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದರ ಕುರಿತು ಹೇಳಿದ್ದರು. “ವಿಶ್ವ ಭಾರತಿಗೆ ಟಾಗೋರ್‌ ಅವರ ದೃಷ್ಟಿಕೋನವು ಆತ್ಮನಿರ್ಭರ ಭಾರತವಾಗಿದೆ. ಆತ್ಮನಿರ್ಭರ ಭಾರತ ಕೇವಲ ಭಾರತ ಅಭಿವೃದ್ದಿ ಮಾತ್ರವಲ್ಲ ವಿಶ್ವದ ಅಭಿವೃದ್ಧಿಗೆ ಭಾರತದ ಹಾದಿಯಾಗಿದೆ” ಎಂದ ಮೋದಿ ನವದೆಹಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿ ಭಾಷಣ ಮಾಡಿದ ಸ್ವಲ್ಪ ಸಮಯದಲ್ಲೇ ಪ್ರತಿಕ್ರಿಯೆ ನೀಡಿದ ತೃಣಮೂಲ ಕಾಂಗ್ರೆಸ್, “ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ, ಆದರೆ 1857 ರಲ್ಲಿ ಸ್ಥಾಪಿಸಲಾದ ದೇಶದ ಮೊದಲ ವಿಶ್ವವಿದ್ಯಾಲಯವಾದ ಕಲ್ಕತ್ತಾ ವಿಶ್ವವಿದ್ಯಾಲಯವನ್ನು ತೊರೆದರು” ಎಂದು ಹೇಳಿದೆ.

“ಟಾಗೋರ್ ಬಗ್ಗೆ ಮಾತನಾಡುವಾಗ ಪದೇ ಪದೇ ಗುಜರಾತ್‌ ಉಲ್ಲೇಖಗಳು ಯಾಕೆ ಬಂದವು ಎಂದು ಅರ್ಥವಾಗಲಿಲ್ಲ, ಜೊತೆಗೆ ಮೋದಿ ಹೇಳಿದ ಕೆಲವು ವಿಷಯಗಳು ವಾಸ್ತವಿಕವಾಗಿ ತಪ್ಪಾಗಿವೆ. ಅಲ್ಲದೆ ಮೋದಿ ಮತ್ತು ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಬಂಗಾಳಿಗಳನ್ನು ಕೆಳಮಟ್ಟದಲ್ಲಿ ತೋರಿಸುತ್ತಿದ್ದಾರೆ” ಎಂದಿರುವ ಟಿಎಂಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿದೆ.

ವಿಶ್ವ-ಭಾರತಿಯನ್ನು 1951 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು. ರವೀಂದ್ರನಾಥ ಟಾಗೋರ್ ಇದನ್ನು 1921 ರಲ್ಲಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...