HomeಮುಖಪುಟTMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

TMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

ಚುನಾವಣೆಯ ಸಮಯದಲ್ಲಿ "ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು" - ಟಿಎಂಸಿ

- Advertisement -
- Advertisement -

ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನ ವೈರಸ್ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ರಾಜ್ಯದಲ್ಲಿ “ಪ್ರಧಾನ ಮಂತ್ರಿ ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿತ್ತು.

ಈ ವಿಷಯದಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯಿಂದ ಮೊದಲು ಚುನಾವಣಾ ಆಯೋಗ ವರದಿಯನ್ನು ಪಡೆಯಿತು. ನಂತರ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಫೋಟೋಗಳನ್ನು ತೆಗೆಯುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ಲಸಿಕೆ ಪ್ರಮಾಣಪತ್ರಗಳಲ್ಲಿ ಪಿಎಂ ಮೋದಿಯವರ ಫೋಟೋ ಕಾಣಿಸದಂತೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರ್ಕಾರಕ್ಕೆ ತಿಳಿಸಲಾಗಿದೆ.

ಮತದಾನ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಬಂಗಾಳದ ಆಡಳಿತ ಪಕ್ಷವು ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಉಲ್ಲೇಖಿಸಿದೆ. ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿ ಕೊಳ್ಳುತ್ತಿದ್ದಾರೆ. ಅವರಿಗೆ ಸಿಗಬೇಕಾದ ಗೌರವವನ್ನು ಪ್ರಧಾನಿ ಕದಿಯುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಪಿಎಂ ಛಾಯಾಚಿತ್ರ, ಹೆಸರು ಮತ್ತು ಸಂದೇಶವನ್ನು ಇರಿಸುವ ಮೂಲಕ, ಅವರು ತಮ್ಮ ಹುದ್ದೆ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಲ್ಲದೇ, ಕೋವಿಡ್ ಲಸಿಕೆಗಳ ಉತ್ಪಾದಕರ ಶ್ಲಾಘನೀಯ ಕಾರ್ಯಕ್ಕೆ ಸಿಗಬೇಕಾದ ಮನ್ನಣೆಯನ್ನು ಪ್ರಧಾನಿ ಪಡೆದುಕೊಳ್ಳುತ್ತಿದ್ದಾರೆ. ನಿಸ್ವಾರ್ಥ ವೈದ್ಯರು, ದಾದಿಯರು ಮತ್ತು ಆರೋಗ್ಯ ಸೇವಾ ಕಾರ್ಯಕರ್ತರ ವಿಶಾಲ ಸೈನ್ಯದ ಗೌರವ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಚುನಾವಣಾ ಸಂಸ್ಥೆಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಚುನಾವಣಾ ಆಯೋಗವು ಪ್ರಧಾನ ಮಂತ್ರಿಯನ್ನು ತಡೆಯಬೇಕು. ಚುನಾವಣೆಯ ಸಮಯದಲ್ಲಿ “ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು” ಎಂದು ಟಿಎಂಸಿ ಸಂಸದ ಒತ್ತಾಯಿಸಿದ್ದರು.

ಆದರೂ ಪ್ರಮಾಣಪತ್ರಗಳು ಇತರ ರಾಜ್ಯಗಳಲ್ಲಿ ಪ್ರಧಾನ ಮಂತ್ರಿಯ ಫೋಟೋಗಳನ್ನು ಹೊಂದಿರಬಹುದು.. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್ ಸೋಮವಾರ ಪ್ರಾರಂಭವಾಯಿತು; ಗಂಭೀರ ಕಾಯಿಲೆಗಳಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಜನರು ಕೋವಿಡ್ ಶಾಟ್‌ಗಳನ್ನು ತೆಗೆದುಕೊಳ್ಳಲು ನೋಂದಾಯಿಸಿಕೊಳ್ಳಬಹುದು.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಮುಂದಿನ ಕೆಲವು ವಾರಗಳಲ್ಲಿ ಚುನಾವಣೆ ಎದುರಿಸಲಿವೆ. ಈ ರಾಜ್ಯಗಳ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದೆ. ಬಂಗಾಳ ಎಂಟು ಹಂತಗಳಲ್ಲಿ ಮತ ಚಲಾಯಿಸಲಿದೆ. ಏಪ್ರಿಲ್ 6 ರಂದು ತಮಿಳುನಾಡು ಮತ್ತು ಕೇರಳ ಒಂದೇ ಸುತ್ತಿನಲ್ಲಿ ಮತ ಚಲಾಯಿಸಲಿವೆ. ಪುದುಚೇರಿಯೂ ಒಂದೇ ದಿನ ಮತ ಚಲಾಯಿಸಲಿದೆ. ಅಸ್ಸಾಂ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತ ಚಲಾಯಿಸಲಿದೆ.


ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...