Homeಮುಖಪುಟಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

ಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನೇ ದಿನೇ ಕಾವೇರುತ್ತಿದೆ. ಅಂಕಣಕಾರ ಸ್ವಪನ್ ದಾಸ್​ಗುಪ್ತಾ ಬಿಜೆಪಿಯಿಂದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಹಿನ್ನೆಲೆಯಲ್ಲಿ ಸಂವಿಧಾನದ ನಿಯಮಗಳನ್ನು ಉಲ್ಲೇಖಿಸಿ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಟಿಎಂಸಿ ಆಗ್ರಹಿಸಿದ ಕೆಲವೇ ಗಂಟೆಗಳಲ್ಲಿ ದಾಸ್‌ಗುಪ್ತಾರವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ವ್ಯಕ್ತಿ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವಂತಿಲ್ಲ. ಆದರೆ ಸ್ವಪನ್ ದಾಸ್‌ಗುಪ್ತಾರವರು ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಟಿಎಂಸಿ ಪಕ್ಷ ಒತ್ತಾಯಿಸಿತ್ತು. ಈ ಕುರಿತು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಟ್ವೀಟ್ ಮಾಡಿದ್ದರು. ಇದೇ ಸಂದರ್ಭದಲ್ಲಿ ಸ್ವಪನ್ ದಾಸ್​ಗುಪ್ತಾ, “ಉತ್ತಮ ಬಂಗಾಳದ ಹೋರಾಟಕ್ಕೆ ಸಂಪೂರ್ಣವಾಗಿ ಬದ್ಧರಾಗುವ ನಿಟ್ಟಿನಲ್ಲಿ ನಾನು ಇಂದು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ತಾರಕೇಶ್ವರ ವಿಧಾನಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಭರವಸೆ ಇದೆ. ಅಷ್ಟರೊಳಗೆ ಎಲ್ಲಾ ಕಾನೂನು ತೊಡಕುಗಳನ್ನು ಮುಗಿಸುವ ವಿಶ್ವಾಸವೂ ಇದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

65 ವರ್ಷದ ಸ್ವಪನ್​ ದಾಸ್​ಗುಪ್ತಾ ಅವರನ್ನು 2016 ರಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮೇಲ್ಮನೆಗೆ ನಾಮ ನಿರ್ದೇಶನ ಮಾಡಿದ್ದರು. ಅವರ ರಾಜ್ಯಸಭಾ ಅವಧಿ ಏಪ್ರಿಲ್ 2022 ರವರೆಗೆ ಇತ್ತು. ಆದರೆ ಬಿಜೆಪಿ ಅಭ್ಯರ್ಥಿಯಾಗಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಅವರ ರಾಜೀನಾಮೆ ಸ್ವೀಕಾರಗೊಳ್ಳಲಿದೆ ಎನ್ನಲಾಗಿದೆ.

ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಈ ಎರಡು ವಿಷಯಗಳಲ್ಲಿ ಕೆಲ ಗೊಂದಲಗಳಿರುವುದು ನಿಜ. ವಿಧಾನಸಭೆಗೆ ನಾಮಪತ್ರ ಸಲ್ಲಿಸುವ ವೇಳೆಗೆ ಈ ಗೊಂದಲಗಳನ್ನು ನಿವಾರಿಸಲಾಗುತ್ತದೆ. ನಾನಿನ್ನು ನಾಮಪತ್ರ ಸಲ್ಲಿಸಿಲ್ಲ. ಈ ಗುರುವಾರ ಅಥವಾ ಶುಕ್ರವಾರ ಸಲ್ಲಿಸುತ್ತೇನೆ. ಅಷ್ಟರಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ದಾಸ್‌ಗುಪ್ತಾ ಹೇಳಿದ್ದಾರೆ.

ದಾಸ್‌ಗುಪ್ತಾ ರಾಜೀನಾಮೆ ನಂತರ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ಮೊಹುವ ಮೊಯಿತ್ರ “ರಾಜೀನಾಮೆ ನೀಡಿದ್ದಕ್ಕೆ ಧನ್ಯವಾದಗಳು ಸರ್. ಮುಂಬರುವ ಬಂಗಾಳ ಚುನಾವಣೆಗೆ ನಾವು ಶುಭಕೋರುತ್ತೇವೆ” ಎಂದು ಟ್ವೀಟ್ ಮಾಡುವು ಮೂಲಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ‘ಆರೋಪಿ ನಂಬರ್‌ 1’ – ಆಂಧ್ರ ಮಾಜಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ ಸಿಐಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...