Homeಮುಖಪುಟಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ "ಕಪ್ಪು" ಬಟ್ಟೆ ಧರಿಸಿ...

ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಇಂದು (ಸೋಮವಾರ) ಮೊದಲ ಬಾರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಣಿಸಿಕೊಂಡಿದೆ. ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಇದು ಅಪರೂಪದ ಬೆಳವಣಿಗೆಯಾಗಿದೆ.

ಈ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಹುಲ್ ಗಾಂಧಿಯ ಸಂಸದರಾಗಿ ಅನರ್ಹಗೊಳಿಸುವಿಕೆಯ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.

ಸಭೆ ಬಳಿಕ ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಪ್ರತಿಪಕ್ಷದ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಕಾರ್ಯತಂತ್ರದ ಸಭೆಯಲ್ಲಿ ತೃಣಮೂಲದ ಪ್ರಸೂನ್ ಬ್ಯಾನರ್ಜಿ ಮತ್ತು ಜವಾಹರ್ ಸಿರ್ಕಾರ್ ಭಾಗಿಯಾದರು. ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನವಾಗಿ ಉಳಿಯುವುದಾಗಿ ಘೋಷಿಸಿದ ನಂತರ ಇದು ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರದ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎಂದು ನಂಬಿರುವುದರಿಂದ ಈ ಪ್ರತಿಭಟನೆಗೆ ಮಾತ್ರ ತಮ್ಮ ಬೆಂಬಲವನ್ನು ಸೀಮಿತಗೊಳಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರತಿಪಾದಿಸಿದೆ.

ಇದನ್ನೂ ಓದಿ: ‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

ತೃಣಮೂಲದ ಕಾಂಗ್ರೆಸ್‌ನ ಅಚ್ಚರಿಯ ಈ ನಡೆಗೆ ಪ್ರತಿಕ್ರಿಯಿಸಿದ ಖರ್ಗೆ, ”ಪ್ರಜಾಪ್ರಭುತ್ವವನ್ನು ರಕ್ಷಿಸಲು” ಯಾರೇ ಮುಂದೆ ಬಂದರೂ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅದಕ್ಕಾಗಿಯೇ ನಾನು ನಿನ್ನೆ ಎಲ್ಲರಿಗೂ ಧನ್ಯವಾದ ಹೇಳಿದ್ದೇನೆ ಮತ್ತು ಇಂದು ಕೂಡ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಜನರನ್ನು ರಕ್ಷಿಸಲು ಯಾರಾದರೂ ಮುಂದೆ ಬಂದರೆ ನಾವು ಸ್ವಾಗತಿಸುತ್ತೇವೆ. ನಮ್ಮನ್ನು ಬೆಂಬಲಿಸುವ ಜನರಿಗೆ ನಾವು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿದರು.

”ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ” ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಸಂಸದರು ಕಪ್ಪು ಶರ್ಟ್ ಧರಿಸಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಪ್ರತಿಸ್ಪರ್ಧಿಯಾಗಿರುವ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆಗೆ “”ಕಪ್ಪು ಬಟ್ಟೆ ಧರಿಸಿ” ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಹದಿನೇಳು ವಿರೋಧ ಪಕ್ಷಗಳು – ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯ ಅನರ್ಹತೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಲೆಕ್ಕಾಚಾರದ ಮೌನವನ್ನು ವಹಿಸಿತ್ತು. ಬಿಜೆಪಿಯು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎನ್ನುವ ವ್ಯಾಪಕ ಕರೆಗಳು ಬಂದಾಗಲೂ ತೃಣಮೂಲ ಸದಸ್ಯರು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಕಾರ್ಯತಂತ್ರದ ಸಭೆಗಳಿಂದ ದೂರ ಉಳಿದಿದ್ದರು.

ಇದೀಗ ಬಿಜೆಪಿಯ ತೀವ್ರ ಟೀಕಾಕಾರರಾಗಿರುವ ತೃಣಮೂಲ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ.

”ಪ್ರಧಾನಿ ಮೋದಿಯವರ ನವಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಅದೇ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಬ್ಯಾನರ್ಜಿ ಹೇಳಿದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...