Homeಮುಖಪುಟಬಿಜೆಪಿ ಪರ ಪ್ರಚಾರ ಆರೋಪ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಟಿಎಂಸಿ ದೂರು

ಬಿಜೆಪಿ ಪರ ಪ್ರಚಾರ ಆರೋಪ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಟಿಎಂಸಿ ದೂರು

- Advertisement -
- Advertisement -

ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ವಿರುದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೊಲ್ಕತ್ತಾದ ರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜ್ಯಪಾಲ ಆನಂದ್ ಬೋಸ್ ಅವರು ತಮ್ಮ ಎದೆಯ ಮೇಲೆ ಬಿಜೆಪಿ ಚಿಹ್ನೆ ಧರಿಸಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿದ ದೂರಿನಲ್ಲಿ ಟಿಎಂಸಿ ಆರೋಪಿಸಿದೆ.

“ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ ಆನಂದ್ ಬೋಸ್ ಅವರು ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂಬುವುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ” ಎಂದು ಹೇಳಿದೆ.

“ರಾಜ್ಯಪಾಲರ ನಡವಳಿಕೆಯು ಪ್ರಜಾಸತ್ತಾತ್ಮಕವಲ್ಲ ಮತ್ತು ಅವರ ಹುದ್ದೆಗೆ ಇರುವ ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ. ಇದು ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ ಎಂದು ದೂರಿನಲ್ಲಿ ಹೇಳಿರುವ ಟಿಎಂಸಿ, ಈ ಹಿಂದೆ ಭಾರತೀಯ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಪ್ರಚಾರಕ್ಕಾಗಿ ತಮ್ಮ ಅಧಿಕಾರವನ್ನು ಬಳಸಿಕೊಂಡ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಗಮನಸೆಳೆದಿದೆ.

“ಉದಾಹರಣೆಗೆ, 1993ರಲ್ಲಿ, ಆಯೋಗವು ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ಗುಲ್ಶರ್ ಅಹ್ಮದ್ ವಿರುದ್ಧ ತನ್ನ ಮಗನ ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಮೇಲೆ ಕ್ರಮ ಕೈಗೊಂಡಿತ್ತು. ಚುನಾವಣಾ ಆಯೋಗದ ಕ್ರಮದ ನಂತರ, ಅಹ್ಮದ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು” ಟಿಎಂಸಿ ತಿಳಿಸಿದೆ.

“2019ರಲ್ಲಿ, ಆಗಿನ ರಾಜಸ್ಥಾನದ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ಅವರು, ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮರು ಆಯ್ಕೆ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಚುನಾವಣಾ ಆಯೋಗವು, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ರಾಜ್ಯಪಾಲರ ವಿರುದ್ದ ರಾಷ್ಟ್ರಪತಿಗೆ ದೂರು ನೀಡಿತ್ತು. ಅದರಂತೆ, ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ” ಎಂದು ಟಿಎಂಸಿ ಹೇಳಿದೆ.

ರಾಜ್ಯಪಾಲರು ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಅವರು ರಾಜಕೀಯ ಸಿದ್ಧಾಂತ ಅಥವಾ ಕೇಂದ್ರ ಸರ್ಕಾರದ ರಾಜಕೀಯ ದೃಷ್ಟಿಕೋನವನ್ನು ಪ್ರತಿನಿಧಿಸಬೇಕಾಗಿಲ್ಲ. ರಾಜ್ಯಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವುದನ್ನು ತಡೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಇದನ್ನೂ ಓದಿ : ವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...