Homeಮುಖಪುಟಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ವಿರುದ್ಧ ಲೋಕಪಾಲ್‌ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮೊಯಿತ್ರಾ ಪೋಸ್ಟ್ ಮಾಡಿದ್ದಾರೆ. “ಪುರಿ ಬುಚ್ ವಿರುದ್ಧ ನಾನು ಎಲೆಕ್ಟ್ರಾನಿಕ್ ಮತ್ತು ಭೌತಿಕ ರೂಪದಲ್ಲಿ ಲೋಕಪಾಲ್‌ಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಲೋಕಪಾಲ್ ಪ್ರಾಥಮಿಕ ತನಿಖೆಗಾಗಿ ಮತ್ತು ನಂತರ ಪೂರ್ಣ ಎಫ್‌ಐಆರ್ ವಿಚಾರಣೆಗಾಗಿ 30 ದಿನಗಳ ಒಳಗೆ ಪ್ರಕರಣವನ್ನು ಸಿಬಿಐ/ಇಡಿಗೆ ನೀಡಬೇಕು. ಈ ಪ್ರಕರಣದಲ್ಲಿ ಒಳಗೊಂಡಿರುವ ಪ್ರತಿಯೊಂದು ಘಟಕದ, ಪ್ರತಿ ಮೂಲದ ತನಿಖೆಯಾಗಬೇಕು” ಎಂದು ಮಹುವಾ ಒತ್ತಾಯಿಸಿದ್ದಾರೆ.

ತನ್ನ ದೂರಿನಲ್ಲಿ ಮೊಯಿತ್ರಾ, ಸೆಬಿ ಅಧ್ಯಕ್ಷೆ ಬುಚ್ ಅವರನ್ನು ಸರಣಿ ಅಪರಾಧಿ ಎಂದು ಉಲ್ಲೇಖಿಸಿದ್ದಾರೆ. ಏಪ್ರಿಲ್ 2017ರಿಂದ ಅಕ್ಟೋಬರ್ 2021ರವರೆಗೆ ಸೆಬಿಯ ಸದಸ್ಯರಾಗಿ ನೇಮಕ ಮಾಡಿರುವುದನ್ನು ಮತ್ತು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಮಾಡಿರುವುದನ್ನೂ ವಿವರಿಸಿದ್ದಾರೆ.

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ.

ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ. ಈ ಆರೋಪಗಳು ಆಧಾರರಹಿತವಾಗಿದೆ. ನಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ. ಸೆಬಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಹಿಂಡನ್‌ಬರ್ಗ್ ಈಗ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ಪ್ರಕರಣ | ಚಾರ್ಜ್ ಶೀಟ್ ಸಲ್ಲಿಕೆಗೆ ಸಿಬಿಐ ವಿಳಂಬ: TCM ನಾಯಕ ಡೆರೆಕ್ ಒ’ಬ್ರಿಯಾನ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...