Homeಮುಖಪುಟಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ದೂರು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ದೂರು

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ವಾಯುಪಡೆಯ ವಿಮಾನ ಬಳಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೂರು ದಾಖಲಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಅವರು ದೂರು ದಾಖಲಿಸಿದ್ದು, “ನಿನ್ನೆ ಮಾರ್ಚ್‌ 17 ಆಂಧ್ರ ಪ್ರದೇಶದ ಪಲ್ನಾಡುವಿನ ಎಸಿ 96-ಚಿಲಕಲುರಿಪೇಟೆಯಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಬಳಸಿದ್ದಕ್ಕಾಗಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ” ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಸರ್ಕಾರದ ಯಂತ್ರೋಪಕರಣಗಳನ್ನು(ವಾಹನಗಳನ್ನು) ಬಳಸುವುದನ್ನು ಚುನಾವಣಾ ಆಯೋಗದ ನಿಯಮಗಳಡಿ ನಿಷೇಧಿಸಲಾಗಿದೆ. ಈ ಕಾರಣಕ್ಕಾಗಿ ವಿಶೇಷವಾಗಿ 1975 ರಲ್ಲಿ ಇಂದಿರಾ ಗಾಂಧಿಯನ್ನು ಅನರ್ಹಗೊಳಿಸಲಾಗಿತ್ತು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

“ಒಂದು ವೇಳೆ ವಾಯುಪಡೆಯ ವಿಮಾನಕ್ಕೆ ಬಿಜೆಪಿ ಬಾಡಿಗೆ ಪಾವತಿಸಿದ್ದರೆ, ವಾಯುಪಡೆಯ ವಿಮಾನವೇ ಯಾಕೆ ಬೇಕು ಎಂದು ಚುನಾವಣಾ ಆಯೋಗ ಎಲ್ಲರಿಗೆ ಸ್ಪಷ್ಟಪಡಿಸಬೇಕು. ಇತರ ಸಿಎಂಗಳು ಸೇರಿದಂತೆ ಝಡ್‌+ ಭದ್ರತೆ ಅಗತ್ಯವಿರುವವರು ಎಲ್ಲಾ ಭದ್ರತಾ ವೈಶಿಷ್ಟ್ಯಗಳನ್ನು ಹೊಂದಿರುವ ಸಾಮಾನ್ಯ ವಿವಿಐಪಿ ಹೆಲಿಕಾಫ್ಟರ್‌ಗಳನ್ನು ಬಳಸುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

“ನೀತಿ ಸಂಹಿತೆ ಉಲ್ಲಂಘನೆಯನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಚುನಾವಣಾ ಆಯೋಗ ಹೇಳಿತ್ತು. ಚುನಾವಣಾ ಪ್ರಚಾರಕ್ಕೆ ವಾಯುಪಡೆಯ ಹೆಲಿಕಾಪ್ಟರ್ ಬಳಸಿದ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗ ತನಿಖೆ ನಡೆಸಲಿದೆಯಾ? ಯಾವು ಕ್ರಮ ಕೈಗೊಳ್ಳಲಿದೆ ಎಂದು ನೋಡೋಣ” ಎಂದಿದ್ದಾರೆ.

ಮಾರ್ಚ್ 17 ರಂದು ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಪಟ್ಟಣದ ಬಳಿಯ ಬೊಪ್ಪುಡಿ ಗ್ರಾಮದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ತೆಲುಗು ದೇಶಂ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಂಡಿದ್ದರು.

ಇದನ್ನೂ ಓದಿ : ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...