Homeಮುಖಪುಟಬಂಗಾಳದಲ್ಲಿ ಕಾಂಗ್ರೆಸ್‌ಗೆ ಕೇವಲ ಎರಡು ಸೀಟಿನ ಆಫರ್ ಕೊಟ್ಟ ಟಿಎಂಸಿ: ವರದಿ

ಬಂಗಾಳದಲ್ಲಿ ಕಾಂಗ್ರೆಸ್‌ಗೆ ಕೇವಲ ಎರಡು ಸೀಟಿನ ಆಫರ್ ಕೊಟ್ಟ ಟಿಎಂಸಿ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಚರ್ಚೆ ಕಾವು ಪಡೆದುಕೊಳ್ಳುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಆಂತರಿಕ ಕಲಹದ ಸೂಚನೆಗಳು ಕಂಡು ಬರುತ್ತಿವೆ. ಒಕ್ಕೂಟದ ಕೆಲ ಪಕ್ಷಗಳ ಬೆಳವಣಿಗೆ ಮತ್ತು ನಾಯಕರ ಹೇಳಿಕೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ.

ಇತ್ತೀತ್ತಿನ ವರದಿಗಳ ಪ್ರಕಾರ, ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಕೇವಲ ಎರಡು ಸೀಟುಗಳನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು ಕೊಡಲು ಉತ್ಸುಕತೆ ತೋರಿದೆ. ಟಿಎಂಸಿ ಎಲ್ಲಾ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಇತ್ತೀಚೆಗೆ ಮಮತಾ ಬ್ಯಾನರ್ಜಿ ಹೇಳಿರುವುದು ಈ ಬೆಳವಣಿಗೆಯನ್ನು ಪುಷ್ಠೀಕರಿಸಿದೆ.

ಟಿಎಂಸಿ ನಡೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, “ನಾವು ಸೀಟಿನ ಭಿಕ್ಷೆ ಬೇಡುವುದಿಲ್ಲ” ಎಂದು ಖಾರವಾಗಿ ಹೇಳಿದ್ದಾರೆ.

ಟಿಎಂಸಿ ಮತ್ತು ಕಾಂಗ್ರೆಸ್‌ನ ಆರಂಭಿಕ ಕಿತ್ತಾಟ ನೋಡಿದರೆ, ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿಗೆ ಲಾಭ ಮಾಡಿಕೊಡುವ ಲಕ್ಷಣಗಳು ಕಾಣುತ್ತಿದೆ.

“ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಾಧ ಮಾಲ್ಡಾ ದಕ್ಷಿಣ ಮತ್ತು ಬೆಹ್ರಾಂಪೋರ್ ಅನ್ನು ಕಾಂಗ್ರೆಸ್‌ಗೆ ನೀಡುವುದಾಗಿ ಟಿಎಂಸಿ ಹೇಳುತ್ತಿದೆ” ಎಂದು ಬಂಗಾಳದ ಮಾಲ್ಡಾ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಸಂಸದ ಅಬು ಹಶೆಮ್ ಖಾನ್ ಚೌಧರಿ ಇತ್ತೀಚೆಗೆ ಹೇಳಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಪ್ರಸ್ತುತ ಕಾಂಗ್ರೆಸ್ ಸಂಸದರಿದ್ದಾರೆ. ಹಾಗಾಗಿ, ಗೆಲ್ಲುವ ಎರಡು ಕ್ಷೇತ್ರಗಳನ್ನೂ ಮಾತ್ರ ಬಿಟ್ಟು ಕೊಡಲು ಟಿಎಂಸಿ ನಿರ್ಧರಿಸಿದೆ ಎನ್ನಲಾಗ್ತಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಬಲಿಷ್ಠವಾಗಿದೆ. ಅಲ್ಲಿನ 42 ಲೋಕಸಭಾ ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಟಿಎಂಸಿ ಸಂಸದರಿದ್ದಾರೆ. 294 ವಿಧಾನಸಭಾ ಕ್ಷೇತ್ರಗಳ ಪೈಕಿ 220 ಕ್ಷೇತ್ರಗಳಲ್ಲಿ ಟಿಎಂಸಿ ಶಾಸಕರಿದ್ದಾರೆ. ಹಾಗಾಗಿ, ಕಾಂಗ್ರೆಸ್‌ಗಿಂತ ಟಿಎಂಸಿಗೆ ಗೆಲ್ಲುವ ಅವಕಾಶ ಜಾಸ್ತಿ ಇದೆ. ಈ ಕಾರಣಕ್ಕೆ ತಮ್ಮ ರಾಜ್ಯದಲ್ಲಿ ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಲ್ಲುವುದು ಟಿಎಂಸಿ ಲೆಕ್ಕಚಾರ. ಆದರೆ, ಇಂಡಿಯಾ ಒಕ್ಕೂಟದ ದೊಡ್ಡಣ್ಣ ಕಾಂಗ್ರೆಸ್ ನಮಗೆ ಇಂತಿಷ್ಟು ಸೀಟು ಬೇಕೆಂದು ಪಟ್ಟು ಹಿಡಿದಿದೆ. ಇದರಿಂದ ಗೊಂದಲ ಏರ್ಪಟ್ಟಿದೆ. ಆಮ್ ಆದ್ಮಿ ಆಡಳಿತ ದೆಹಲಿಯಲ್ಲೂ ಇದೇ ಪರಿಸ್ಥಿತಿಯಿದೆ.

ಇದನ್ನೂ ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...