Homeಮುಖಪುಟ'ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ' : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

- Advertisement -
- Advertisement -

“ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು ಪ್ರಾರಂಭಿಸಿದೆವು. ನಾನು ಅವರ ಪಕ್ಷವನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇನೆ”, ಇದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಡಾಯ ಬಣದ ಅಧ್ಯಕ್ಷರಾಗಿರುವ ಹೌರಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಅರೂಪ್ ರಾಯ್ ಅವರ ಮಾತು.

ಇಂಡಿಯನ್‌ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅರೂಪ್ ರಾಯ್, “ನಾನು ಯಾವುದೇ ಬಂಡಾಯ ಬಣವನ್ನು ರೂಪಿಸಿಲ್ಲ. ಇತರರು ಅದನ್ನು ಮಾಡಿದರು. ನಾನು ಹೆಚ್ಚು ಸಂಖ್ಯೆಯಿದ್ದ ಪಕ್ಷದ ಪರವಾಗಿ ನಿಂತೆ. ವಿರೋಧ ಪಕ್ಷದ ನಾಯಕರ ರಿತಬ್ರತಾ ಬ್ಯಾನರ್ಜಿ ಕಡೆಯಿಂದ ನನಗೆ ಆಹ್ವಾನ ಬಂದಿದ್ದರಿಂದ ನಾನು ಅವರ ಸಭೆಯಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ.

ಟಿಎಂಸಿಯ ಬಂಡಾಯ ಬಣವು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಅರೂಪ್ ರಾಯ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಸಭೆಯ ನಡಾವಳಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಚುನಾವಣಾ ಸೋಲಿನ ಬಳಿಕ ಮೊದಲ ಸಭೆಯು ಮಮತಾ ಬ್ಯಾನರ್ಜಿ ಅವರ ಮನೆಯಲ್ಲೇ ನಡೆದಿತ್ತು. ಆ ವೇಳೆ ಶೋವನ್ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಗೆ ನಾನು ಸಹಿ ಮಾಡಿದ್ದೆ ಎಂದು ಅರೂಪ್ ರಾಯ್ ತಿಳಿಸಿದ್ದಾರೆ.

ಪಕ್ಷವು ವಿಧಾನಸಭಾಧ್ಯಕ್ಷರ ಕಚೇರಿಗೆ ಸಲ್ಲಿಸಿದ್ದ ಕೆಲವು ಸಹಿಗಳು ನಕಲಿಯಾಗಿವೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪೊಲೀಸರು ನನಗೆ ತೋರಿಸಿದ ದಾಖಲೆಗಳಲ್ಲಿ ಇದ್ದ ಸಹಿ ನನ್ನದಲ್ಲ” ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿಯ ಮುಖ್ಯ ಸಲಹೆಗಾರರನ್ನಾಗಿ ಮಾಡಲು ಬಯಸುವುದಾಗಿ ವಿರೋಧ ಪಕ್ಷದ ನಾಯಕ ರಿತಬ್ರತಾ ಬ್ಯಾನರ್ಜಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅರೂಪ್ ರಾಯ್, ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅದನ್ನು ಹೇಳುತ್ತಿಲ್ಲ. ನಾನು ಏನು ಹೇಳಬೇಕೆಂದು ಬಯಸಿದ್ದೆನೋ, ಅದನ್ನು ಈಗಾಗಲೇ ಮಾಡಿದ್ದೇನೆ ಎಂದಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಹೇಗೆ ಎದುರಿಸುತ್ತೀರಿ..ನಿಮ್ಮ ತಂತ್ರವೇನು ಎಂಬ ಪ್ರಶ್ನೆಗೆ ಉತ್ತಿರಿಸಿರುವ ಅರೂಪ್‌ ರಾಯ್, “ನಾವು ರಚನಾತ್ಮಕ ಟೀಕೆಯನ್ನು ಮಾಡುತ್ತೇವೆ. ನಾವು ಬಿಜೆಪಿಯ ತಪ್ಪುಗಳನ್ನು ಎತ್ತಿ ತೋರಿಸುತ್ತೇವೆ ಮತ್ತು ಅವರ ನೀತಿಗಳನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಚುನಾವಣೆ ಸೋಲಿನ ನಂತರ ಹಲ್ಲೆಗೊಳಗಾದ ಟಿಎಂಸಿ ಕಾರ್ಯಕರ್ತರ ಬಗ್ಗೆ ಏನು ಹೇಳುತ್ತೀರಿ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ನಾವು ನಮ್ಮ ಕಾರ್ಯಕರ್ತರ ಪರವಾಗಿ ನಿಲ್ಲಬೇಕು. ಆ ಸಭೆಯಲ್ಲೂ ನಾನು ಇದನ್ನೇ ಹೇಳಿದ್ದೆ. ಅಪರಾಧಗಳನ್ನು ಮಾಡಿ ಕಾನೂನು ಮೊಕದ್ದಮೆಗಳನ್ನು ಎದುರಿಸುತ್ತಿರುವವರ ವಿಷಯವೇ ಬೇರೆ. ಆದರೆ ಯಾವ ಕಾರ್ಯಕರ್ತರು ಮತ್ತು ನಾಯಕರು ನಿರಪರಾಧಿಗಳಾಗಿದ್ದಾರೋ, ನಾವು ಅವರ ಪರವಾಗಿ ನಿಲ್ಲಬೇಕು. ಅವರ ಪರವಾಗಿ ನಿಲ್ಲುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಬಂಡಾಯ ಬಣದ ಹೆಚ್ಚಿನ ಸಂಸದರು ಮತ್ತು ಶಾಸಕರು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ. ನೀವು ಅವರೊಂದಿಗೆ ಸಹಮತ ಹೊಂದಿದ್ದೀರಾ? ಎಂಬ ಉತ್ತರಿಸಿದ ರಾಯ್, “ಸಂಸದರು ಮತ್ತು ಶಾಸಕರ ಅಭಿಪ್ರಾಯಗಳು ವಿಭಿನ್ನವಾಗಿವೆ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಶಾಸಕರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನನಗೆ ಯಾರ ಮೇಲೂ ಯಾವುದೇ ಆರೋಪಗಳಿಲ್ಲ” ಎಂದು ತಿಳಿಸಿದ್ದಾರೆ.

ಮುಂದೆ ಟಿಎಂಸಿ ಪಕ್ಷದ ಧ್ವಜ, ಚಿಹ್ನೆ ಮತ್ತು ಬ್ಯಾಂಕ್‌ ಖಾತೆಗಳನ್ನು ವಶಕ್ಕೆ ಪಡೆಯುತ್ತೀರಾ? ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪಕ್ಷದ ಚಿಹ್ನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಆಯೋಗಕ್ಕೆ ಅಧಿಕೃತ ಪತ್ರವನ್ನು ನೀಡಿದ್ದೇವೆ. ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಯಾವುದೇ ನಿರ್ಣಯವನ್ನು ಅಂಗೀಕರಿಸಿಲ್ಲ. ಆದರೆ, ಖಾತೆ ಪರಿಶೀಲಿಸಲು ಒಬ್ಬ ಆಡಿಟರ್ (ಲೆಕ್ಕ ಪರಿಶೋಧಕ) ಅನ್ನು ನೇಮಿಸಲಾಗುವುದು ಎಂದು ವಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Courtesy : indianexpress.com





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...