Homeಮುಖಪುಟಉತ್ತರಾಖಂಡದಲ್ಲಿ ಸಿಎಂ ರಾಜೀನಾಮೆ: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯಲಿದೆ ಎಂದ ಟಿಎಂಸಿ

ಉತ್ತರಾಖಂಡದಲ್ಲಿ ಸಿಎಂ ರಾಜೀನಾಮೆ: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯಲಿದೆ ಎಂದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕಡಿಮೆ ಕೋವಿಡ್ ಸೋಂಕಿನ ಪ್ರಕರಣಗಳನ್ನು ಉಲ್ಲೇಖಿಸಿರುವ ತೃಣಮೂಲ ಕಾಂಗ್ರೆಸ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕರಾಗಿ ಆಯ್ಕೆ ಮಾಡುವ ಭಬನಿಪುರ್‌ ಉಪಚುನಾವಣೆ ನವೆಂಬರ್ 5 ರ ಮೊದಲು ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಉತ್ತರಾಖಂಡದಲ್ಲಿ ಮಾಜಿ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಶಾಸಕರಾಗಿ ಆಯ್ಕೆಯಾಗದಿರುವುದು ಮತ್ತು ಕೊರೊನಾ ಕಾರಣಗಳಿಂದ ಅವರಿಂದ ರಾಜೀನಾಮೆ ಪಡೆದ ಬಿಜೆಪಿ, ಹೊಸ ಮುಖ್ಯಮಂತ್ರಿಯಾಗಿ ಪುಷ್ಕರ್‌ ಸಿಂಗ್ ಧಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದೆ.

ಇದೇ ನೆಪ ಮಾಡಿಕೊಂಡು ಪಶ್ಚಿಮ ಬಂಗಾಳದಲ್ಲೂ ಉಪ ಚುನಾವಣೆ ನಡೆಸದೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ರಾಜೀನಾಮೆ ಕೊಡುವಂತೆ ಒತ್ತಡ ಹೇರಬಹುದು ಎಂಬ ಹಿನ್ನೆಲೆಯಲ್ಲಿ ಟಿಎಂಸಿ, ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಮಾಜಿ ಟಿಎಂಸಿ ನಾಯಕ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಶಾಸಕರಾಗಿ ಆಯ್ಕೆಯಾಗದೆ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ, ಉಪ ಚುನಾವಣೆಯಲ್ಲಿ ಭಬನಿಪುರ್‌ನಿಂದ ಸ್ಪರ್ಧಿಸಲಿದ್ದಾರೆ.

ಜನರ ಪ್ರಾತಿನಿಧ್ಯ ಕಾಯ್ದೆಯಡಿ, ಮುಖ್ಯಮಂತ್ರಿ ಅಥವಾ ಸಚಿವರು ಪ್ರಮಾಣವಚನ ಸ್ವೀಕರಿಸಿದ ಆರು ತಿಂಗಳೊಳಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಬೇಕಾಗಿದೆ.

ತಿರತ್ ​​ಸಿಂಗ್ ರಾವತ್ ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಎಲ್ಲರ ಕಣ್ಣುಗಳು ಪಶ್ಚಿಮ ಬಂಗಾಳದತ್ತ ಇವೆ. ಬಿಜೆಪಿ ಸಂಸದ ತಿರತ್ ​​ಸಿಂಗ್ ರಾವತ್ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮಾರ್ಚ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸೆಪ್ಟಂಬರ್ 10ರ ಒಳಗೆ, ಅವರು ಶಾಸಕರಾಗಿ ಆಯ್ಕೆಯಾಗಬೇಕಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಅವರಿಮದ ರಾಜಿನಾಮೆ ಪಡೆದು ಉಪಚುನಾವಣೆ ನಡೆಸದೆ, ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ.

ಕೋಲ್ಕತ್ತಾದ ತೃಣಮೂಲ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಸುಖೇಂದು ಶೇಖರ್ ರಾಯ್, “ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರು ಮಾರ್ಚ್‌ನಲ್ಲಿ ಆಯ್ಕೆಯಾಗಿದ್ದರು, ಸೆಪ್ಟೆಂಬರ್‌ನಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಸಮಯವಿತ್ತು. ಬಹುಶಃ, ಕೋವಿಡ್ ಕಾರಣದಿಂದಾಗಿ ಅವರು ಉತ್ತರಾಖಂಡದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿರಬಹುದು. ಆದರೆ ಬಂಗಾಳದಲ್ಲಿ ನಾವು ಉಪಚುನಾವಣೆ ನಡೆಸಬಹುದು. ಬಂಗಾಳದಲ್ಲಿ ಉಪಚುನಾವಣೆ ನಡೆಯುವುದಿಲ್ಲ ಎಂಬ ಆತಂಕ ನಮಗಿಲ್ಲ. ಇಂದಿನಿಂದಲೇ ಚುನಾವಣಾ ಆಯೋಗವು ಯಾವುದೇ ದಿನ ಉಪಚುನಾವಣೆ ನಡೆಸಬಹುದು” ಎಂದಿದ್ದಾರೆ.

ರಾಜ್ಯ ಸಬೆಯ ಎರಡು ಸ್ಥಾನಗಳಿಗೆ ಮಾತ್ರವಲ್ಲ, ವಿಧಾನಸಭೆಯ ಏಳು ಸ್ಥಾನಗಳಿಗೂ ಉಪಚುನಾವಣೆ ನಡೆಸುವಂತೆ ಟಿಎಂಸಿ ನೇತೃತ್ವದ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.


ಇದನ್ನೂ ಓದಿ: ಉತ್ತರಾಖಂಡ: ಆರು ತಿಂಗಳಲ್ಲಿ ಮೂರು ಮುಖ್ಯಮಂತ್ರಿ; ಪುಷ್ಕರ್‌ ಸಿಂಗ್ ಧಾಮಿ ಮುಂದಿನ ಸಿಎಂ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...