ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಿಂದ ತೃಣಮೂಲ ಕಾಂಗ್ರೆಸ್ ಶಾಸಕರು ಆತಂಕಗೊಳ್ಳಬೇಡಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ತೃಣಮೂಲ ಪಕ್ಷದ ಅವಕಾಶಗಳಿಗೆ ಹಾನಿ ಮಾಡುವಷ್ಟು ಕಾಂಗ್ರೆಸ್ ರಾಜ್ಯದಲ್ಲಿ ಬಲವಾಗಿಲ್ಲ ಎಂದು ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ
ರಾಜ್ಯ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಬ್ಯಾನರ್ಜಿ ತಿರಸ್ಕರಿಸಿದ್ದು, ತೃಣಮೂಲ ಪಕ್ಷವು ಮೂರನೇ ಎರಡರಷ್ಟು ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ. 2026 ರ ಮೊದಲಾರ್ಧದಲ್ಲಿ ಪಶ್ಚಿಮ ಬಂಗಾಳ ಚುನಾವಣೆಗೆ ಸಜ್ಜಾಗುವ ನಿರೀಕ್ಷೆಯಿದೆ.
“ದೆಹಲಿಯಲ್ಲಿ ಕಾಂಗ್ರೆಸ್ ಎಎಪಿಗೆ ಸಹಾಯ ಮಾಡಲಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. “ದೆಹಲಿಯಲ್ಲಿ [ಎಎಪಿ ಜೊತೆ] ಸೀಟು ಹೊಂದಾಣಿಕೆಯ ಸಮಯದಲ್ಲಿ ಕಾಂಗ್ರೆಸ್ ಹೆಚ್ಚು ಹೊಂದಿಕೊಳ್ಳಬೇಕಿತ್ತು. ಅದೇ ರೀತಿ, ಹರಿಯಾಣದಲ್ಲಿ, ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದರ ಪರಿಣಾಮ ಕಠಿಣವಾಗಿತ್ತು.” ಎಂದು ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೈತ್ರಿ ಮಾಡಿಕೊಳ್ಳದರ ಪರಿಣಾಮವಾಗಿ, ಹರಿಯಾಣ ಮತ್ತು ದೆಹಲಿಯಲ್ಲಿ ಬಿಜೆಪಿ ಗೆದ್ದಿತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.
ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷದ ಇಂಡಿಯಾ ಮೈತ್ರಿಯ ಸದಸ್ಯರಾಗಿದ್ದರೂ ದೆಹಲಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದವು. 2024 ರ ಲೋಕಸಭಾ ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟವು ದೆಹಲಿಯ ಎಲ್ಲಾ ಏಳು ಸಂಸದೀಯ ಸ್ಥಾನಗಳನ್ನು ಸೋತಿದ್ದು, ಅಲ್ಲಿ ಬಿಜೆಪಿ ಗೆದ್ದುಕೊಂಡಿತ್ತು.
ಕಾಂಗ್ರೆಸ್ ಮತ್ತು ಎಡಪಕ್ಷಗಳು, ಕೆಲವು ಸಣ್ಣ ಪಕ್ಷಗಳೊಂದಿಗೆ, 2021 ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದವು. ಸುಮಾರು 10% ಮತಗಳನ್ನು ಪಡೆದಿದ್ದರೂ ಕೂಡಾ 294 ಸದಸ್ಯರ ವಿಧಾನಸಭೆಯಲ್ಲಿ ಈ ಮೈತ್ರಿಕೂಟ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ, ಕಾಂಗ್ರೆಸ್-ಎಡ ಮೈತ್ರಿಕೂಟ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಗೆದ್ದಿತು.
“ದೆಹಲಿಯಲ್ಲಿ, ಕಾಂಗ್ರೆಸ್ ಪಕ್ಷವೂ ಎಎಪಿಗೆ ಹೊಡೆತ ನೀಡಿರಬಹುದು. ಆದರೆ ಇಲ್ಲಿ ಅವರಿಗೆ ಅದು ಸಾಧ್ಯವಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಮತ್ತು ನಾವು ಮೂರನೇ ಎರಡರಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ… ಇಲ್ಲಿ ಯಾರೂ ಲೆಕ್ಕಕ್ಕಿಲ್ಲ, ಅವೆರು ನಮ್ಮ ಮತಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನಾವು 2026 ರಲ್ಲಿ ಸುಲಭವಾಗಿ ಗೆಲ್ಲುತ್ತೇವೆ.” ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಮಮತಾ ಅವರು ಹೇಳಿದ್ದಾರೆ.
ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಪ್ಪಿಸಲು ಸಮಾನ ಮನಸ್ಸಿನ ಪಕ್ಷಗಳು ತಿಳುವಳಿಕೆಯನ್ನು ಹೊಂದಿರಬೇಕು. ಇಲ್ಲದಿದ್ದರೆ, ವಿರೋಧ ಪಕ್ಷದ ಇಂಡಿಯಾ ಮೈತ್ರಿಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ತಡೆಯುವುದು ಕಷ್ಟವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.
ಇದನ್ನೂಓದಿ: ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ
ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ


