Homeಮುಖಪುಟತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

- Advertisement -
- Advertisement -

ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಕೆ. ಪೊನ್ಮುಡಿ ಮತ್ತು ವಿದ್ಯುತ್ ಹಾಗೂ ಅಬಕಾರಿ ಇಲಾಖೆ ಸಚಿವ ವಿ. ಸೆಂಥಿಲ್‌ ಬಾಲಾಜಿ ಭಾನುವಾರ (ಏಪ್ರಿಲ್ 27, 2025) ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನದ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಲು ಮತ್ತು ಮಾಜಿ ಸಚಿವ ಮನೋ ತಂಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಏಪ್ರಿಲ್ 28ರಂದು ರಾಜಭವನದಲ್ಲಿ ನೂತನ ಸಚಿವ ತಂಗರಾಜನ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ರಾಜೀನಾಮೆ ಬಳಿಕ ಪೊನ್ಮುಡಿ ಅವರ ಖಾತೆಯನ್ನು ಹೈನುಗಾರಿಕೆ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕನ್ನಪ್ಪನ್ ಅವರಿಗೆ ನೀಡಲಾಗಿದೆ. ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ವಿದ್ಯುತ್ ಖಾತೆಯನ್ನು ವಹಿಸಿಕೊಂಡಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರು ಸೆಂಥಿಲ್‌ಬಾಲಾಜಿ ಅವರು ಹೊಂದಿದ್ದ ಅಬಕಾರಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಸಚಿವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ ಅವರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂಧಿದ್ದಾರೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಸಂಪುಟಕ್ಕೆ ಮರು ಸೇರ್ಪಡೆಗೊಂಡ ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂಕೋರ್ಟ್ ಎರಡು ಆಯ್ಕೆಗಳನ್ನು ನೀಡಿತ್ತು.ಒಂದಾ ತಕ್ಷಣ ಸಚಿವ ಸ್ಥಾನ ತೊರೆದು ಸ್ವಾತಂತ್ರ್ಯ ಅನುಭವಿಸಿ, ಇಲ್ಲ ಮತ್ತೆ ಸಚಿವರಾಗಿ ಜೈಲು ಸೇರಿ ಎಂದು ಖಾರವಾಗಿ ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 2023ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಖಾತೆ ಇಲ್ಲದ ಸಚಿವರಾಗಿ ಮುಂದುವರಿದಿದ್ದರು. ನಂತರ ಫೆಬ್ರವರಿ 12, 2024ರಂದು ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 26, 2024 ರಂದು ಸುಪ್ರೀಂ ಕೋರ್ಟ್ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ನೀಡಿದ ನಂತರ ಮತ್ತೆ ಸಂಪುಟ ಸೇರಿದ್ದರು.

ಆದರೆ, ಸುಪ್ರೀಂ ಕೋರ್ಟ್ ಸೆಂಥಿಲ್ ಬಾಲಾಜಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸೆಂಥಿಲ್‌ಬಾಲಾಜಿ ಸಚಿವರಾಗಿ ಮುಂದುವರಿಯುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಅವರು ವಿಚಾರಣೆಯ ಹಳಿ ತಪ್ಪಿಸಬಹುದು ಎಂದು ಏಪ್ರಿಲ್ 23 ರಂದು ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವರಾಗಿ ಮುಂದುವರಿದಲ್ಲಿ ಜಾಮೀನು ಆದೇಶವನ್ನು ಹಿಂಪಡೆಯುತ್ತೇವೆ. ಅವರಿಗೆ ಜಾಮೀನು ನೀಡಿದ ಕ್ರಮ ನಮ್ಮ ಪ್ರಮಾದ ಎಂದು ಒಪ್ಪಿಕೊಳ್ಳಬೇಕಾಗುತ್ತದೆ. ಅವರಿಗೆ ಅರ್ಹತೆಯ ಮೇಲೆ ಜಾಮೀನು ನೀಡಿಲ್ಲ. ಸಂವಿಧಾನದ 21ನೇ ವಿಧಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಪರವಾಗಿ ನ್ಯಾಯಾಲಯ ನಿಂತಿದ್ದರಿಂದ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ ಎಸ್‌.ಓಕಾ ಹೇಳಿದ್ದರು.

ಆಕ್ಷೇಪಾರ್ಹ ಹೇಳಿಕೆ

ಶೈವರು, ವೈಷ್ಣವರು ಮತ್ತು ಮಹಿಳೆಯರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದ ನಂತರ ಪೊನ್ಮುಡಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಪೊನ್ಮುಡಿ ಅವರ ಅಪರಾಧ ಮತ್ತು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದ ಸ್ವಾತಂತ್ರ್ಯವನ್ನು ಅವರು ಪ್ರಾಥಮಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಪೊನ್ಮುಡಿ ವಿರುದ್ಧ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದ್ದರು.

ಆಕ್ಷೇಪಾರ್ಹ ಹೇಳಿಕೆ ನೀಡಿದ ಪೊನ್ಮುಡಿ ಅವರನ್ನು ಎಲ್ಲಾ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಪಿಐಎಲ್‌ ಸಂಬಂಧ ಪ್ರತಿಕ್ರಿಯಿಸಲು ತಮಿಳುನಾಡು ಸರ್ಕಾರ ಮತ್ತು ಪೊನ್ಮುಡಿ ಅವರಿಗೆ ಜೂನ್ 5ರವರೆಗೆ ನ್ಯಾಯಾಲಯ ಸಮಯ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಫೀಕ್ ಅವರು ರಾಜ್ಯ ಸರ್ಕಾರಿ ವಕೀಲರಿಗೆ ಗೃಹ ಕಾರ್ಯದರ್ಶಿ ಪರವಾಗಿ ನೋಟಿಸ್ ನೀಡುವಂತೆ ನಿರ್ದೇಶಿಸಿದ್ದರು. ಜೂನ್ 5ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಪೊನ್ಮುಡಿ ಅವರಿಗೂ ಆದೇಶಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಜೂನ್ 19 ರಂದು ಮತ್ತೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದರು. ಈ ನಡುವೆ ಪೊನ್ಮುಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...