Homeಮುಖಪುಟದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

- Advertisement -
- Advertisement -

ಚುನಾವಣಾ ಪ್ರಚಾರದ ಸಮಯದಲ್ಲಿ ದ್ವೇಷಪೂರಿತ ಭಾಷಣಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆಯನ್ನು ಕೇಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ ಮದ್ರಾಸ್‌ ಹೈಕೋರ್ಟ್‌ ಮೊರೆ ಹೋಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ದ್ವೇಷದ ಭಾಷಣಗಳ ಬಗ್ಗೆ ವಿವರಣೆಯನ್ನು ಕೇಳಲು ಮತ್ತು ಸುಳ್ಳು, ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕಲು ಮತ್ತು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಮತ್ತಷ್ಟು ಸುಳ್ಳು ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಕಾಂಗ್ರೆಸ್ ಸಮಿತಿ ಮದ್ರಾಸ್ ಹೈಕೋರ್ಟ್‌ಗೆ ಮನವಿ ಮಾಡಿದೆ.

ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯು ಹಿಂದೂ ರಾಷ್ಟ್ರೀಯತೆಯ ಒಡೆದು ಆಳುವ ಪ್ರಚಾರದಲ್ಲಿ ತೊಡಗಿದೆ ಎಂದು ಕೆ.ಸೆಲ್ವಪೆರುಂತಗೈ ನೇತೃತ್ವದ ಸಮಿತಿಯು ಮನವಿಯಲ್ಲಿ ಹೇಳಿಕೊಂಡಿದೆ.

ಪ್ರಧಾನಿಯವರ ಭಾಷಣವು ಕಟ್ಟುಕಥೆಗಳಿಂದ ತುಂಬಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳುವ ನಿಂದನಾತ್ಮಕ ಭಾಷೆಯನ್ನು ಬಳಸಿದ್ದರು. ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಭಾಷಣವು ಅಗೌರವ ಮಾತ್ರವಲ್ಲ, ನಾಚಿಕೆಗೇಡಿನದ್ದಾಗಿದೆ, ಅವರು ಕೋಮು ಉದ್ವಿಗ್ನತೆಯನ್ನು ಉತ್ತೇಜಿಸುತ್ತಾರೆ ಮತ್ತು ಜನರ ನಡುವೆ ವಿಭಜನೆಯನ್ನು ಬಿತ್ತುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದ ಎಲ್ಲ ನಾಗರಿಕರ ಘನತೆಯನ್ನು ಎತ್ತಿ ಹಿಡಿಯಬೇಕಿದ್ದ ಪ್ರಧಾನಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ತಾವು ಮಾಡಿದ ಪ್ರಮಾಣ ವಚನವನ್ನು ಉಲ್ಲಂಘಿಸುತ್ತಿದ್ದಾರೆ. ಅಂತಹ ಹೇಳಿಕೆಗಳು ಅಪಾಯಕಾರಿ ಪೂರ್ವನಿದರ್ಶನಕ್ಕೆ ಕಾರಣವಾಗುತ್ತದೆ. ಹಲವಾರು ದೂರುಗಳ ಹೊರತಾಗಿಯೂ, ಚುನಾವಣಾ ಆಯೋಗವು ಶೋಕಾಸ್ ನೋಟಿಸ್‌ನ್ನು ಮಾತ್ರ ಕಳುಹಿಸಿದೆ ಮತ್ತು ಚುನಾವಣಾ ಆಯೋಗವು ತೋರಿದ ಇಂತಹ ಮೃದುತ್ವವು ನಾಗರಿಕರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಮತ್ತು ಇಡೀ ಚುನಾವಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...