Homeಮುಖಪುಟಮೋದಿಯ ಧ್ಯಾನಕ್ಕೆ ತಗುಲಿದ ವೆಚ್ಚ ಮರುವಸೂಲಿ ಕೋರಿ ಹೈಕೋರ್ಟ್‌ ಮೊರೆ

ಮೋದಿಯ ಧ್ಯಾನಕ್ಕೆ ತಗುಲಿದ ವೆಚ್ಚ ಮರುವಸೂಲಿ ಕೋರಿ ಹೈಕೋರ್ಟ್‌ ಮೊರೆ

- Advertisement -
- Advertisement -

ಕನ್ಯಾಕುಮಾರಿಯಲ್ಲಿ ಮೋದಿಯ ಧ್ಯಾನಕ್ಕಾಗಿ ತಗಲಿದ ವೆಚ್ಚದ ಮರುವಸೂಲಿಯನ್ನು ಕೋರಿ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ)ಯು ಮದ್ರಾಸ್ ಹೈಕೋರ್ಟ್‌ ಮೆಟ್ಟಿಲೇರಿದೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಸದಸ್ಯ ಮತ್ತು ವಕೀಲರಾದ ಎಪಿ ಸೂರ್ಯಪ್ರಕಾಶಂ ಈ ಕುರಿತು ಮಾತನಾಡಿದ್ದು, ಪ್ರಧಾನಿಯವರು ಕನ್ಯಾಕುಮಾರಿಗೆ ಖಾಸಗಿ ಭೇಟಿಯನ್ನು ನೀಡಿದ್ದಾರೆ. ಭದ್ರತಾ ಅಂಶಗಳನ್ನು ಬಿಡಿ, ರಾಜ್ಯ ಸರಕಾರವು ಈ ಭೇಟಿಗೆ ಸಂಬಂಧಿಸಿದಂತೆ ಭಾರೀ ಮೊತ್ತವನ್ನು ವ್ಯಯಿಸಿದೆ. ಈ ವೆಚ್ಚವನ್ನು ಬಿಜೆಪಿಯಿಂದ ಮರುವಸೂಲು ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಸದಸ್ಯ ಮತ್ತು ವಕೀಲರಾದ ಎಪಿ ಸೂರ್ಯಪ್ರಕಾಶಂ ಮತ್ತುಇತರ ಆರು ವಕೀಲರು ಸಲ್ಲಿಸಿದ ಅರ್ಜಿಯು, ಪ್ರಧಾನಿ ಮೋದಿ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನಗಳನ್ನು ನೀಡಬೇಕೆಂದು ಹೈಕೋರ್ಟ್‌ಗೆ ಆಗ್ರಹಿಸಿದೆ.

ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಧ್ಯಾನವು ಬಿಜೆಪಿಗೆ ಮತಗಳನ್ನು ಸೆಳೆಯುವ ಪ್ರಯತ್ನವಾಗಿದೆ. ಮೇ 30ರಂದು ಮೋದಿಯ ಧ್ಯಾನವನ್ನು ದೂರದರ್ಶನದಲ್ಲಿ ಮತ್ತು ಖಾಸಗಿ ವಾಹಿನಿಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ, ಇದು ವಿರೋಧಪಕ್ಷಗಳಿಗೆ ಅನಾನುಕೂಲ ಉಂಟು ಮಾಡಿದೆ ಮತ್ತು ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮದ್ರಾಸ್ ಹೈಕೋರ್ಟ್‌ ಗಮನಕ್ಕೆ ತಂದಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತಾಸಕ್ತಿಯಿಂದ ಅಧಿಕೃತ ಸ್ಥಾನಗಳ ದುರ್ಬಳಕೆಯನ್ನು ತಡೆಯಲು ತಕ್ಷಣವೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಧಾನಿ ಭೇಟಿಯ ಸಂದರ್ಭದಲ್ಲಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಪ್ರವಾಸಿಗರು ಮತ್ತು ಹಿಂದೂ ಭಕ್ತರು ಭೇಟಿ ನೀಡುವುದನ್ನು ತಡೆಯದಂತೆ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಮಧ್ಯಂತರ ನಿರ್ದೇಶನವನ್ನು ಕೂಡ ನೀಡುವಂತೆ ಅರ್ಜಿಯಲ್ಲಿ ಅಗ್ರಹಿಸಲಾಗಿತ್ತು.

ಲೋಕಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನವನ್ನು ನಡೆಸಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...