Homeಮುಖಪುಟತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸುತ್ತಿದ್ದ ಮುಷ್ಕರವನ್ನು ಕಾರ್ಮಿಕರು ಹಿಂಪಡೆದಿದ್ದಾರೆ ಎಂದು ತಮಿಳುನಾಡು ಸರ್ಕಾರದ ಕಾರ್ಮಿಕ ಇಲಾಖೆ ಅಕ್ಟೋಬರ್ 15 ಮಂಗಳವಾರ ಪ್ರಕಟಿಸಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟಿಸುತ್ತಿದ್ದರು.

ಕಾರ್ಮಿಕರು ಮುಷ್ಕರವನ್ನು ಹಿಂಪಡೆದು ಕೆಲಸಕ್ಕೆ ಮರಳಲು ಒಪ್ಪಿಗೆ ನೀಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. “ಕೆಲಸಕ್ಕೆ ಹಿಂದಿರುಗಿದ ನಂತರ, ಮುಷ್ಕರದಲ್ಲಿ ಭಾಗವಹಿಸಿದ್ದಕ್ಕಾಗಿ ಕಂಪನಿಯು ಕಾರ್ಮಿಕರನ್ನು ಗುರಿಯಾಗಿಸಬಾರದು. ಕಾರ್ಮಿಕರು ಕೂಡ ಕಂಪನಿಯೊಂದಿಗೆ ಸಹಕರಿಸಬೇಕು, ಕಂಪನಿಯ ಹಿತಾಸಕ್ತಿಗೆ ಹಾನಿಯುಂಟುಮಾಡುವ ಯಾವುದೇ ಕೃತ್ಯಗಳನ್ನು ಮಾಡಬಾರದು. ಸಂಧಾನ ಅಧಿಕಾರಿಯ ಮುಂದೆ ಕಾರ್ಮಿಕರು ಸಲ್ಲಿಸಿರುವ ಬೇಡಿಕೆಗಳ ಪಟ್ಟಿಗೆ ಕಂಪನಿಯ ಆಡಳಿತವು ಲಿಖಿತ ರೂಪದಲ್ಲಿ ಉತ್ತರ ಸಲ್ಲಿಸಬೇಕು ಎಂದು ಹೇಳಿದೆ.

“ಮಾತುಕತೆಗಳು ಉತ್ತಮವಾಗಿ ನಡೆದಿವೆ. ನಾವು ಅನುಕೂಲಕರ ಒಪ್ಪಂದಗಳಿಗೆ ಬಂದಿದ್ದೇವೆ. ನಾಳೆ ನಾವು ಕಾರ್ಮಿಕರೊಂದಿಗೆ ಕೌನ್ಸಿಲ್ ಸಭೆ ನಡೆಸಿ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇಂದಿನ ಸಭೆಯಲ್ಲಿ ಲೋಕಪಯೋಗಿ ಸಚಿವ ಇವಿ ವೇಲು, ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿವಿ ಗಣೇಶನ್, ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಮತ್ತು ಎಂಎಸ್‌ಎಂಇ ಸಚಿವ ಟಿಎಂ ಅನ್ಬರಸನ್ ಉಪಸ್ಥಿತರಿದ್ದರು” ಎಂದು ಸಿಐಟಿಯು ಅಧ್ಯಕ್ಷ ಎ ಸೌಂದರರಾಜನ್ ತಿಳಿಸಿದ್ದಾರೆ.

ಮುಷ್ಕರ ನಿರತ ಕಾರ್ಮಿಕರು ಕೆಲಸಕ್ಕೆ ಮರಳುತ್ತಿರುವ ಬಗ್ಗೆ ಮಾತನಾಡಿರುವ ಸೌಂದರರಾಜನ್, ಅಕ್ಟೋಬರ್ 16ರ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದರೆ, ಕಾರ್ಮಿಕರು ಮರುದಿನ ಕೆಲಸಕ್ಕೆ ಹಾಜರಾಗಲಿದ್ದಾರೆ. ನಮ್ಮೊಂದಿಗೆ ಮಾತನಾಡಲು ನಿರಾಕರಿಸಿದ್ದ ಸ್ಯಾಮ್‌ಸಂಗ್ ಕಂಪನಿ ಇಂದು ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿದ್ದು, ಸಚಿವರು ಮತ್ತು ರಾಜ್ಯ ಸರ್ಕಾರದ ಪ್ರಯತ್ನಗಳಿಂದಾಗಿ ಈ ಮಹತ್ವದ ಬೆಳವಣಿಗೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ. ಸರ್ಕಾರದ ಮೂಲಗಳ ಪ್ರಕಾರ, ಒಕ್ಕೂಟದ ನೋಂದಣಿ ಶೀಘ್ರದಲ್ಲೇ ನಡೆಯಲಿದೆ.

ಈ ವರ್ಷದ ಜುಲೈನಲ್ಲಿ ಸ್ಯಾಮ್‌ಸಂಗ್‌ ಘಟಕದಲ್ಲಿ ಕೆಲಸ ಮಾಡುವ ಸುಮಾರು 1,700 ಉದ್ಯೋಗಿಗಳಲ್ಲಿ 1,500 ಉದ್ಯೋಗಿಗಳು ‘ಸ್ಯಾಮ್‌ಸಂಗ್ ಇಂಡಿಯಾ ಥೋಝಿಲಾಲರ್ ಸಂಗಮ್‌’ನ ಸದಸ್ಯರಾಗಲು ಸಹಿ ಹಾಕಿದ್ದರು. ಇದನ್ನು ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (SIWU)ಎಂದೂ ಕರೆಯಲಾಗುತ್ತದೆ. ಇದು ಸೆಂಟರ್ ಆಫ್ ಇಂಡಿಯನ್ ಟ್ರೇಡ್‌ ಯೂನಿಯನ್‌ (ಸಿಐಟಿಯು) ಗೆ ಸಂಯೋಜಿತವಾಗಿದೆ. ತಮ್ಮ ಒಕ್ಕೂಟದ ನೋಂದಣಿಗಾಗಿ ಕಾರ್ಮಿಕರು ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದರು.

ಪ್ರತಿಭಟನೆಯ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ನೌಕರರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಯಿತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಯಿತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದುಹಾಕಲಾಯಿತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ಈಗಾಗಲೇ ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಒಟ್ಟಿನಲ್ಲಿ ಒಂದು ತಿಂಗಳ ಬಳಿಕ ಸರ್ಕಾರ ಮತ್ತು ಕಂಪನಿ ಕನಿಷ್ಠ ಪಕ್ಷ ಕಾರ್ಮಿಕರ ಬೇಡಿಕೆ ಅಳಿಸಲು ಮುಂದಾಗಿದೆ. ಕಾರ್ಮಿಕರ ಬೇಡಿಕೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದರೆ ಪ್ರತಿಭಟನೆ ಅಂತ್ಯಗೊಳ್ಳಬಹುದು. ಪ್ರಸ್ತುತ ಸರ್ಕಾರ ಮುಷ್ಕರ ಕೈ ಬಿಟ್ಟಿದ್ದಾರೆ ಎಂದು ಘೋಷಣೆ ಮಾಡಿದೆ. ಆದರೆ, ಕಾರ್ಮಿಕರು ಇಂದು ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ.

ಇದನ್ನೂ ಓದಿ : ವಯನಾಡ್ ಕ್ಷೇತ್ರದ ಉಪಚುನಾವಣೆ ಘೋಷಣೆ | ಪ್ರಿಯಾಂಕಾ ಸ್ಪರ್ಧೆಗೆ ಅಖಾಡ ರೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...