Homeಮುಖಪುಟಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

- Advertisement -
- Advertisement -

ಶಾಲಾ ಶಿಕ್ಷಣಕ್ಕಾಗಿ ರೂಪಿಸಿರುವ ಸಮಗ್ರ ಶಿಕ್ಷಣ (ಎಸ್‌ಎಸ್‌) ಯೋಜನೆಗೆ ನೀಡಬೇಕಾದ ತನ್ನ ಪಾಲಿನ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ತ್ರಿಭಾಷಾ ಸೂತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ನಿಬಂಧನೆಗಳು ಒಳಗೊಂಡಿರುವ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ, ಮೇ 1,2025 ರಿಂದ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳುವವರಗೆ 2,151.59 ಕೋಟಿ ರೂಪಾಯಿ ಮೂಲ ಮೊತ್ತದ ಮೇಲೆ ವಾರ್ಷಿಕ ಶೇ. 6 ದರದಲ್ಲಿ ಭವಿಷ್ಯದ ಬಡ್ಡಿಯೊಂದಿಗೆ 2,291.30 ಕೋಟಿ ರೂಪಾಯಿಯನ್ನು ನ್ಯಾಯಾಲಯ ನಿಗದಿಪಡಿಸುವ ಸಮಯದೊಳಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಶನಿವಾರ ಚೆನ್ನೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಅನುದಾನ ತಡೆ ಹಿಡಿದ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಘೋಷಿಸಿದ್ದರು. ಕಳೆದ ಏಪ್ರಿಲ್‌ನಲ್ಲಿ ರಾಜ್ಯಪಾಲ ಆರ್.ಎನ್. ರವಿ ವಿರುದ್ಧದ ಪ್ರಕರಣದಲ್ಲಿ ಬಂದಂತೆ ಅನುಕೂಲಕರ ತೀರ್ಪು ಬರುವ ಭರವಸೆ ವ್ಯಕ್ತಪಡಿಸಿದ್ದರು.

ಕೇಂದ್ರ ಸರ್ಕಾರವು ಶಿಕ್ಷಣ ಯೋಜನೆಗಳಿಗೆ ಬಿಡುಗಡೆ ಮಾಡಬೇಕಾದ ಅನುದಾನಗಳನ್ನು ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂಶ್ರಿ ಜೊತೆ ಲಿಂಕ್ ಮಾಡಲು ಉದ್ದೇಶಿಸಿದೆ. ಈ ಮೂಲಕ ತ್ರಿಭಾಷಾ ಸೂತ್ರ ಸೇರಿದಂತೆ ಎನ್‌ಇಪಿಯ ನಿಬಂಧನೆಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ ಎಂದು ವರದಿಯಾಗಿದೆ.

ಸಮಗ್ರ ಶಿಕ್ಷಣ ಯೋಜನೆಗಳ ಅನುದಾನ ನೀಡದೆ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ. ಇದು ಪಟ್ಟಿ IIIರ ನಮೂದು 25 ಅಡಿಯಲ್ಲಿ ಕಾನೂನು ರೂಪಿಸಲು ರಾಜ್ಯ ಸರ್ಕಾರ ಹೊಂದಿರುವ ಅಧಿಕಾರವನ್ನು ಕಸಿದು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಕೇಂದ್ರ ಸರ್ಕಾರ ಎನ್‌ಇಪಿಯನ್ನು ಹೇರುವ ಮೂಲಕ ಪ್ರಸ್ತುತ ಇರುವ ಶಿಕ್ಷಣ ನೀತಿಯನ್ನು ಕೈಬಿಡಲು ಒತ್ತಾಯಿಸುತ್ತಿದೆ ದೂರಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಔಪಚಾರಿಕ ಒಪ್ಪಂದ ಮಾಡಿಕೊಳ್ಳುವವರೆಗೆ ಎನ್‌ಇಪಿ- 2020 ಮತ್ತು ಪಿಎಂಶ್ರಿ ಯೋಜನೆಯು ತಮಿಳುನಾಡಿಗೆ ಅನ್ವಯಿಸುವುದಿಲ್ಲ ಎಂದು ಘೋಷಿಸಲು ನ್ಯಾಯಾಲಯವನ್ನು ಕೋರಿದೆ.

ಸಮಗ್ರ ಶಿಕ್ಷಣ ಯೋಜನೆಯ ಅನುದಾನವನ್ನು ಪಿಎಂಶ್ರಿ ಯೋಜನೆಯ ಜೊತೆಗೆ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ‘ಅಸಂವಿಧಾನಿಕ, ಕಾನೂನುಬಾಹಿರ, ಅನಿಯಂತ್ರಿತ ಮತ್ತು ಅಸಮಂಜಸ’ ಎಂದು ಘೋಷಿಸಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಫೆಬ್ರವರಿ 23 ಮತ್ತು ಮಾರ್ಚ್ 7, 2024 ರಂದು ಕೇಂದ್ರ ಶಿಕ್ಷಣ ಸಚಿವಾಲಯ ಬರೆದ ಪತ್ರಗಳು ‘ಕಾನೂನುಬಾಹಿರ, ಅನೂರ್ಜಿತ’ ಮತ್ತು ರಾಜ್ಯಕ್ಕೆ ಅನ್ವಯ ಆಗುವುದಿಲ್ಲ’ ಎಂದು ಘೋಷಿಸಲು ಸಹ ಕೋರಿದೆ.

ಈಗಾಗಲೇ ಕೋರಿರುವ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡುವುದರ ಜೊತೆಗೆ, ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ಮಿತಿಯೊಳಗೆ 2009ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಾದ ಅನುದಾನವನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ತನ್ನ ಶಾಸನಬದ್ಧ ಬಾಧ್ಯತೆಗಳನ್ನು ಅನುಸರಿಸಲು ಮತ್ತು ನಿರ್ವಹಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...