Homeಕರ್ನಾಟಕಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

ಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆಯಾಗಿದೆ. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ. ಮಕ್ಕಳಲ್ಲಿ ವಿಶ್ವಮಾನವ ಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆಯಾಗಿದೆ ಎಂದು ಹೇಳಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ೆಂದು ತಿಳಿಸಿದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ: 40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಮ ಸಮಾಜ ಬಂದರೆ ಶಾಂತಿಯ ತೋಟ

”ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...