Homeಚಳವಳಿರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

“ಹೌದು ಅಥವಾ ಇಲ್ಲ ಎಂಬ ಉತ್ತರವನ್ನಲ್ಲದೇ ಮತ್ತೇನನ್ನೂ ಬಯಸುವುದಿಲ್ಲ. ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ” ಎಂದು ರೈತ ಮುಖಂಡರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಕೇಂದ್ರದ ರೈತವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕಳೆದ ಹಲವು ದಿನಗಳಿಂದ ದೇಶದ ರೈತರು ರಾಷ್ಟ್ರರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ದೇಶದಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್ ಕೂಡ ಬಹುತೇಕ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ನಿನ್ನೆ ಸಂಜೆ ರೈತ ಮುಖಂಡರನ್ನು ಗೃಹ ಸಚಿವ ಅಮಿತ್ ಶಾ ಮಾತುಕತೆಗೆ ಕರೆದಿದ್ದರು. ಆದರೆ ಈ ಮಾತುಕತೆಯೂ ಕೂಡ ವಿಫಲವಾಗಿದೆ.

ಹಲವು ರೈತ ಸಂಘಟನೆಗಳ 13 ಪ್ರತಿನಿಧಿಗಳ ಜತೆಗೆ ಗೃಹಸಚಿವರು ಮಂಗಳವಾರ ರಾತ್ರಿ 8.30ರ ಹೊತ್ತಿಗೆ ನಡೆಸಿದ ಮಾತುಕತೆ ವಿಫಲವಾಗಿದೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

ಕಳೆದ 13 ದಿನಗಳಿಂದ ದೆಹಲಿಯಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ನಡುವೆ ನಿನ್ನೆ ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದರು. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ಇಂದು ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸದ ರೈತ ಮುಖಂಡರು, “ಹೌದು ಅಥವಾ ಇಲ್ಲ ಎಂಬ ಉತ್ತರವನ್ನಲ್ಲದೇ ಮತ್ತೇನನ್ನೂ ಬಯಸುವುದಿಲ್ಲ. ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ” ಎಂದು ರೈತ ಮುಖಂಡ ರುದ್ರು ಸಿಂಗ್ ಮಾನ್ಸಾ ಸಿಂಗ್ ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ: ರಾಜಕೀಯ ನಿವೃತ್ತಿ ಕೇವಲ ವದಂತಿಯಷ್ಟೇ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ನಿನ್ನೆಯ ಸಭೆಯಲ್ಲಿ ಅಮಿತ್ ಶಾ “ಕಾಯ್ದೆಗಳಿಗೆ ಮಾಡಬಹುದಾದ ತಿದ್ದುಪಡಿಗಳ ಬಗ್ಗೆ ಲಿಖಿತ ಭರವಸೆ ಕೊಡಲಾಗುವುದು” ಎಂದು ಹೇಳಿದ್ದಾರೆ.

ಆದರೆ, “ಕಾಯ್ದೆಗಳನ್ನು ರದ್ದು ಮಾಡಬೇಕು ಎಂಬುದು ನಮ್ಮ ಬೇಡಿಕೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಜತೆಗೆ ಮುಂದಿನ ಹಂತದ ಮಾತುಕತೆಯ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ರೈತ ಮುಖಂಡ ಹನ್ನನ್‌ ಮೊಲ್ಲಾ ಸಭೆಯ ಬಳಿಕ ಹೇಳಿದ್ದಾರೆ.

ಇಂದು ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರೊಂದಿಗೆ ಇಮದು ಆರನೇ ಸುತ್ತಿನ ಮಾತುಕತೆ ನಡೆಸಬೇಕಾಗಿತ್ತು. ಆದರೆ ಇಂದಿನ ಸಭೆಯು ರದ್ದಾಗಿದೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...