Homeಮುಖಪುಟದೆಹಲಿ 'ಇಸ್ಲಾಮಿಕ್' ರಾಜ್ಯವಾಗದಂತೆ ತಡೆಯಲು ಬಿಜೆಪಿಗೆ ಮತ ನೀಡಿ : ಗಿರಿರಾಜ್‌ ಸಿಂಗ್‌

ದೆಹಲಿ ‘ಇಸ್ಲಾಮಿಕ್’ ರಾಜ್ಯವಾಗದಂತೆ ತಡೆಯಲು ಬಿಜೆಪಿಗೆ ಮತ ನೀಡಿ : ಗಿರಿರಾಜ್‌ ಸಿಂಗ್‌

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿರುವ ದಿನವೇ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ದೆಹಲಿ ‘ಇಸ್ಲಾಮಿಕ್’ ರಾಜ್ಯವಾಗದಂತೆ ತಡೆಯಲು ಬಿಜೆಪಿಗೆ ಮತ ನೀಡಿ ಎಂದು ಒತ್ತಾಯಿಸಿದ್ದಾರೆ.

ಶಾಹೀನ್ ಬಾಗ್ ಬೆಂಬಲಿಗರು ಕೇಜ್ರಿವಾಲ್ ಪರ ಮತ ಚಲಾಯಿಸಲು ಮುಂದಾಗಿದ್ದಾರೆ. ದೆಹಲಿಯ ಜನರಿಗೆ ನನ್ನ ಮನವಿ ಏನೆಂದರೆ, ಶಹೀನ್ ಬಾಗ್ ಅನ್ನು ನಿಲ್ಲಿಸಬೇಕಾದರೆ, ದೆಹಲಿಯನ್ನು ಇಸ್ಲಾಮಿಕ್ ರಾಷ್ಟ್ರವಾಗದಂತೆ ಉಳಿಸಲು, ನೀವೆಲ್ಲರೂ ಮನೆಯಿಂದ ಹೊರಗೆ ಬಂದು ಬಿಜೆಪಿಗೆ ಮತ ನೀಡಿ ಎಂದು ಟ್ವೀಟ್‌ ಮಾಡಿದ್ದಾರೆ.

ಇದು ಸ್ಪಷ್ಟವಾಗಿ ಧಾರ್ಮಿಕ ಅವಹೇಳನ ಮತ್ತು ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಕಾದು ನೋಡಬೇಕಿದೆ.

ಕಳೆದ ಬಾರಿ ಶೇ.67% ರಷ್ಟು ಮತದಾನ ದಾಖಲಾಗಿತ್ತು. ಆದರೆ ಈ ಬಾರಿ ಇನ್ನು ಕೇವಲ 30% ಸಹ ದಾಟಿಲ್ಲ. ಹಾಗಾಗಿ ಹತಾಶೆಗೊಳಗಾಗಿರುವ ಕೇಂದ್ರ ಸಚಿವ ಗಿರಿರಾಜ್‌ಸಿಂಗ್‌ ಈ ರೀತಿಯ ವಿವಾದಾತ್ಮಕ ಟ್ವೀಟ್‌ ಮಾಡಿದ್ದಾರೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In other words “As per his comments, if the people want to be Educationally forward, Health Sector in good condition, Good transport, No Communal polarisation, they should vote other than BJP”.

LEAVE A REPLY

Please enter your comment!
Please enter your name here

- Advertisment -

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...