Homeಅಂತರಾಷ್ಟ್ರೀಯಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್‌ಎಸ್‌ಎ) ಮುಖ್ಯಸ್ಥ ಅಜಿತ್ ದೋವಲ್‌‌ ಅವರು ಇರಾನ್‌ ಸರ್ಕಾರಕ್ಕೆ ಹೇಳಿದ್ದಾರೆ ಎಂದು TOI ವರದಿ ಮಾಡಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು ಎಂದು ಅವರ ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮತ್ತು ದೆಹಲಿ ಮಾಧ್ಯಮ ಮುಖ್ಯಸ್ಥ ನೀಡಿದ ಅವಹೇಳನಕಾರಿ ಹೇಳಿಕೆಗಳ ವಿರುದ್ಧ, ಗಲ್ಪ್‌ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಪಕ್ಷವು ಒಬ್ಬರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಅಜಿತ್ ದೋವಲ್ ಜೊತೆಗೆ ನಡೆದ ಸಭೆಯ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇರಾನ್ ಸರ್ಕಾರದ ಹೇಳಿಕೆಯ ಪ್ರಕಾರ, “ಎನ್‌ಎಸ್‌ಎ ಅಜಿತ್ ದೋವಲ್ ಸಭೆಯಲ್ಲಿ, ಪ್ರವಾದಿಯ ಬಗ್ಗೆ ಭಾರತ ಸರ್ಕಾರದ ಗೌರವವನ್ನು ಪುನರುಚ್ಚರಿಸಿದರು. ತಪ್ಪು ಮಾಡಿದವರನ್ನು ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌‌ಬುಕ್‌ನಲ್ಲಿ ‘ನೂಪುರ್ ಶರ್ಮಾ’ ಬೆಂಬಲಿಸಿದ ಬಿಜೆಪಿ ಯುವಮೋರ್ಚಾ ನಾಯಕನ ವಿರುದ್ಧ ಎಫ್‌ಐಆರ್‌‌

ವಿವಾದದ ಬಗ್ಗೆ ಭಾರತ ಮತ್ತು ಇರಾನ್ ನಡುವಿನ ದೀರ್ಘಕಾಲದ ನಾಗರಿಕತೆ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೃದಯದಿಂದ ನೆನಪಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬ್ದುಲ್ಲಾಹಿಯನ್ ಕರೆ ಮಾಡಿದ್ದಾರೆ ಎಂದು ಇರಾನ್ ಹೇಳಿದೆ.

“ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರ ಉಪಕ್ರಮಗಳ ಕುರಿತು ಚರ್ಚಿಸಿದರು. ಕೋವಿಡ್ ನಂತರದ ಯುಗದಲ್ಲಿ ವಿನಿಮಯವನ್ನು ವೇಗಗೊಳಿಸಲು ಎರಡೂ ದೇಶಗಳು ಕೆಲಸ ಮಾಡಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಇರಾನ್‌ ಹೇಳಿಕೆಯಲ್ಲಿ ಹೇಳಿದೆ.

“ಪ್ರಧಾನ ಮಂತ್ರಿ ಮೋದಿಯವರು ಇರಾನ್ ವಿದೇಶಾಂಗ ಸಚಿವರಿಗೆ ತಮ್ಮ ಶುಭಾಶಯಗಳನ್ನು ಗೌರವಾನ್ವಿತ ಅಧ್ಯಕ್ಷ ಇಬ್ರಾಹಿಂ ರೈಸಿಗೆ ರವಾನಿಸಲು ವಿನಂತಿಸಿದರು. ಶೀಘ್ರದಲ್ಲಿಯೇ ಇರಾನ್ ಅಧ್ಯಕ್ಷರನ್ನು ಭೇಟಿಯಾಗಲು ಎದುರುನೋಡುತ್ತಿದ್ದೇವೆ” ಎಂದು ಇರಾನ್ ಸಚಿವರೊಂದಿಗಿನ ಮೋದಿ ಭೇಟಿಯ ಕುರಿತು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಭಾರತ ಮತ್ತು ಇರಾನ್ ನಡುವಿನ ಶತಮಾನಗಳ ಹಳೆಯ ನಾಗರಿಕತೆಯ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಯ ಕುರಿತು ಉಪಯುಕ್ತ ಚರ್ಚೆಗಾಗಿ ವಿದೇಶಾಂಗ ಸಚಿವ ಹೊಸೈನ್ ಅಮಿರ್‌ ಅಬ್ದೊಲ್ಲಾಹಿಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಮ್ಮ ಸಂಬಂಧಗಳು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡಿವೆ. ಜೊತೆಗೆ ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂತ ಕಲಬೆರಕೆ ಮಾಧ್ಯಮಗಳು,ದೇಶದ್ರೋಹಿ ಕಮ್ಯೂನಿಸ್ಟ್ ರು ,ಕೆಲ ಗುಲಾಮರು ಇರೋವರೆಗೂ ಈ ದೇಶದ ಘನತೆಗೆ ತೊಂದರೆ ಖಚಿತ ,ಹೆಚ್ಚು ಕಾಲ ನಿಮ್ಮ ಆಟ ನಡೆಯಲ್ಲಾ ಈ ದೇಶದಲ್ಲಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...