Homeಮುಖಪುಟಗುಟ್ಕಾ ಪರ ಪ್ರಚಾರ: ಶಾರೂಖ್ ಖಾನ್, ಅಕ್ಷಯ್ ಕುಮಾರ್‌ಗೆ ನೊಟೀಸ್‌

ಗುಟ್ಕಾ ಪರ ಪ್ರಚಾರ: ಶಾರೂಖ್ ಖಾನ್, ಅಕ್ಷಯ್ ಕುಮಾರ್‌ಗೆ ನೊಟೀಸ್‌

- Advertisement -
- Advertisement -

ಗುಟ್ಕಾ ಪರ ಪ್ರಚಾರ ಮಾಡಿದ್ದಕ್ಕಾಗಿ‌ ಬಾಲಿವುಡ್ ನಟರಾದ ಶಾರೂಖ್ ಖಾನ್, ಅಕ್ಷಯ್ ಕುಮಾರ್ ಹಾಗೂ ಅಜಯ್ ದೇವಗನ್ ಅವರಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು ನೋಟಿಸ್ ಜಾರಿಗೊಳಿಸಿದೆ ಎಂದು ಅಲಹಬಾಬಾದ್ ಹೈಕೋರ್ಟ್‌ನ ಲಕ್ನೋ ಪೀಠಕ್ಕೆ ಕೇಂದ್ರ ಸರಕಾರ ಮಾಹಿತಿ ನೀಡಿದೆ.

ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರೂ ಕೂಡ ಹಾನಿಕಾರಕ ತಂಬಾಕು ಉತ್ಪನ್ನಗಳನ್ನು ಪ್ರಚಾರ ಮಾಡುವ ನಟರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಹೈಕೋರ್ಟ್‌ ಮೊರೆ ಹೋದ ನಂತರ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರ ಪೀಠವು ಸೆ. 2022ರಲ್ಲಿ ಕೇಂದ್ರಕ್ಕೆ ಕ್ರಮ ಕೈಗೊಳ್ಳುವಂತೆ  ಕೇಳಿತ್ತು.

ಸೆಪ್ಟೆಂಬರ್ 2022ರ ಹೈಕೋರ್ಟ್‌ ಆದೇಶವನ್ನು ಅನುಸರಿಸಲಾಗಿಲ್ಲ ಎಂದು ನ್ಯಾಯಾಂಗ ನಿಂದನೆ ಆರೋಪಿಸಿ  ಸಲ್ಲಿಸಿದ ಮನವಿಯಲ್ಲಿ ನ್ಯಾಯಾಲಯವು ಕ್ಯಾಬಿನೆಟ್ ಕಾರ್ಯದರ್ಶಿ, ಮುಖ್ಯ ಆಯುಕ್ತರು ಮತ್ತು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಡೆಪ್ಯುಟಿ ಸಾಲಿಸಿಟರ್ ಜನರಲ್, ನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಅವರಿಗೆ ಅ.20ರಂದು ನೋಟಿಸ್ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯಕ್ಕೆ ತೀವ್ರ ಸ್ವರೂಪದಲ್ಲಿ ಹಾನಿಯೆಸಗುವ ನಿರ್ದಿಷ್ಟ ಉತ್ಪನ್ನಗಳ ಪರ ಪ್ರಚಾರ ನಡೆಸುವುದು ಅಥವಾ ಜಾಹೀರಾತಿನಲ್ಲಿ ಪಾಲ್ಗೊಳ್ಳುವುದು, ವಿಶೇಷವಾಗಿ ಪದ್ಮ ಪ್ರಶಸ್ತಿ ಪುರಸ್ಕೃತ ನಟರು ಭಾಗಿಯಾಗುವುದರ ಬಗ್ಗೆ ಕಳವಳ ವ್ಯಕ್ತಪಡಿಸಿ ವಕೀಲ ಮೋತಿಲಾಲ್ ಯಾದವ್ ಅವರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಈ ವಿಷಯವನ್ನು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ತ್ವರಿತ ಅರ್ಜಿಯ ವಿಚಾರಣೆ ವಜಾಗೊಳಿಸಬೇಕು ಎಂದು ಕೇಂದ್ರದ ಪರ ವಕೀಲರು ಇದೇ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದು, ಪೀಠವು ವಿಚಾರಣೆಯನ್ನು 2024ರ ಮೇ.9ಕ್ಕೆ ಮುಂದೂಡಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...