Homeಮುಖಪುಟಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

- Advertisement -
- Advertisement -

ಕೇಂದ್ರ ನೂತನ ಸಣ್ಣ ಅವಧಿಯ ಸೈನಿಕ ಸೇವೆಯ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ಘೋಷಿಸಿ ಒಂದು ವಾರವಾಗುತ್ತಿದ್ದರೂ ಪ್ರತಿಭಟನೆಗಳು ಜೋರಾಗುತ್ತಲೇ ಇವೆ. ಕಾಶ್ಮೀರದಿಂದ ಕೇರಳದವರೆಗೆ ಪ್ರತಿಭಟನೆಗಳು ವ್ಯಾಪಿಸಿದ್ದು, ಉದ್ಯೋಗ ಆಕಾಂಕ್ಷಿಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಇಂದು 350 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ಪ್ರತಿಭಟನೆಗಳು ಉಲ್ಭಣವಾಗಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಕಚೇರಿಗಳಿಗೆ ರಕ್ಷಣೆ ಹೆಚ್ಚಿಸಲಾಗಿದೆ. ಅಗತ್ಯಬಿದ್ದರೆ 20 ಜಿಲ್ಲೆಗಳಲ್ಲಿ ‘ಇಂಟರ್ನೆಟ್’ ಕಡಿತಗೊಳಿಸಲು ಯೋಜಿಸಲಾಗಿದೆ ಎಂದು ವರದಿಯಾಗಿದೆ.

ಜಾರ್ಖಂಡ್‌ನಲ್ಲಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಇಂದು ನಡೆಯಬೇಕಿದ್ದ 9 ಮತ್ತು 11 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೇರಳದಲ್ಲಿ ಎಲ್ಲಾ ಪೊಲೀಸರು ಇಂದು ಕಾರ್ಯನಿರ್ವಹಿಸಲಿದ್ದು, ಹಿಂಸಾಚಾರಕ್ಕೆ ಇಳಿದವರನ್ನು ಬಂಧಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರತೀಕಾರದ ಇಡಿ ದಾಳಿ ವಿರೋಧಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ದೇಶಾದ್ಯಂತ ಶಾಂತಿಯುತ ಧರಣಿಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆಗೆ ಆಕ್ರೋಶ: ಯೋಜನೆ ಹಿಂತೆಗೆದುಕೊಳ್ಳಲು ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಇಂದೋರ್‌ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಬೆದರಿಕೆ, ಚಿತ್ರಹಿಂಸೆ ಕಾರಣ?

0
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಅವರನ್ನು ಬೆದರಿಸಿ ಚಿತ್ರಹಿಂಸೆ ನೀಡಿ ನಾಮಪತ್ರ ಹಿಂಪಡೆಯುವಂತೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ವಿರೋಧ...