ಇಂದು ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನ: ಮಂಗಳೂರಿನಲ್ಲಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಂಕನಾಡಿ ಘಟಕದ ವತಿಯಿಂದ, “ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವ್ಯಾಪಾರಿಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ಹಾಗೂ ಸಿಹಿತಿಂಡಿ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಕಂಕನಾಡಿ ಘಟಕದ ಅಧ್ಯಕ್ಷ ಗೊಪಾಲ್ ಕುಲಾಲ್, ಕಾರ್ಯದರ್ಶಿ ಗಜಾನನ, ಮಾಜಿ ಅಧ್ಯಕ್ಷ ಅಣ್ಣಯ್ಯ ಕುಲಾಲ್, ಸದಸ್ಯರಾದ ತಾರನಾಥ್, ರಾಘವ್, ಕೃಷ್ಣಪ್ಪ ಪೂಜಾರಿ, ಪ್ರಕಾಶ್, ಅಶ್ರಫ್, ಪ್ರವೀಣ್ ಕುಮಾರ್, ರಾಘು, ಮೋನಪ್ಪ, ಅನಿಲ್, ವಿನ್ಸಿ, ಪ್ರವೀಣ್, ಬೀ ಕಾಂಚಿಜನ್, ರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

“ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಹಕ್ಕುಗಳ ರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014”, ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ ದಿನವನ್ನು ಬೀದಿಬದಿ ವ್ಯಾಪಾರಿಗಳ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ – ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಸಂಘದ ಗೌರವಾಧ್ಯಕ್ಷರು ಮತ್ತು ಮಹಾನಗರ ಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರು ಆದ ಬಿ.ಕೆ ಇಮ್ತಿಯಾಝ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು “ಬೀದಿ ಬದಿ ವ್ಯಾಪಾರ ಸಮಾಜದ ಮತ್ತು ವ್ಯವಸ್ಥೆಯ ಒಂದು ಭಾಗ. ಬೀದಿಬದಿ ವ್ಯಾಪಾರಿಗಳ ಸಂಘಟಿತ ಹೋರಾಟದಿಂದ ದೇಶದಲ್ಲಿ ಕಾನೂನು ಮತ್ತು ನೀತಿ ಜಾರಿಗೆ ಬಂದಿದೆ. ಈ ಕಾನೂನು ಜಾರಿಗೆ ಬಂದಿರುವುದರಿಂದ ಬೀದಿಬದಿ ವ್ಯಾಪಾರಿಗಳು ಘನತೆಯಿಂದ ಬದುಕುವಂತಾಗಿದೆ. ಮಂಗಳೂರು ನಗರದಲ್ಲೂ ಅನೇಕ ಹೋರಾಟಗಳು ನಡೆದಿವೆ. ನಗರದಲ್ಲಿ 598 ಜನರಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಲಾಗಿದೆ” ಎಂದು ಹೇಳಿದರು.

ಮಹಾನಗರ ಪಾಲಿಕೆ ಮುಂದಿನ ಬಜೆಟಿನಲ್ಲಿ ಪ್ರತಿ ವಾರ್ಡಿಗೆ ಒಂದು ಬೀದಿಬದಿ ವ್ಯಾಪಾರ ವಲಯ ಘೋಷಣೆ ಮಾಡಿ ಹಣ ಮೀಸಲಿಡಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ನಗರದಲ್ಲಿ ಸಂಘದ ಹಲವು ಘಟಕಗಳ ಬೀದಿ ಬದಿ ವ್ಯಾಪಾರಸ್ಥರು ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು.

ಇಂಡಿಯನ್‌ ರೆಡ್‌ ಕ್ರಾಸ್‌ ಮತ್ತು voice of blood donors ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಸಿದರು. ಪೌರ ಕಾರ್ಮಿಕರಿಗೆ ರೇಷನ್‌ ಕಿಟ್‌ ವಿತರಣೆ, ಸುರತ್ಕಲ್‌ನಲ್ಲಿ ಹೆಚ್‌ಐವಿ ಪಾಸಿಟಿವ್‌ ಮಕ್ಕಳ ಆಶ್ರಮಕ್ಕೆ ಆಹಾರ ನೀಡಿದರು. ಕಂಕನಾಡಿ ಸ್ಟೇಟ್ ಬ್ಯಾಂಕ್ ಮತ್ತು ಹಂಪನಕಟ್ಟೆ ಬಳಿ ಸಾರ್ವಜನಿಕರಿಗೆ ಮಾಸ್ಕ್‌ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು.


ಇದನ್ನೂ ಓದಿ: ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here