Homeಮುಖಪುಟಮಹಾ ಶಕ್ತಿಪ್ರದರ್ಶನಕ್ಕೆ ವೇದಿಕೆ ಸಜ್ಜು: ಪ್ರಮಾಣ ವಚನ ಕಾರ್ಯಕ್ರಮಕ್ಕೆ ಘಟಾನುಘಟಿಗಳಿಗೆ ಆಹ್ವಾನ

ಮಹಾ ಶಕ್ತಿಪ್ರದರ್ಶನಕ್ಕೆ ವೇದಿಕೆ ಸಜ್ಜು: ಪ್ರಮಾಣ ವಚನ ಕಾರ್ಯಕ್ರಮಕ್ಕೆ ಘಟಾನುಘಟಿಗಳಿಗೆ ಆಹ್ವಾನ

ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ

- Advertisement -
- Advertisement -

ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಯಿಂದ ರಚನೆಯಾಗಲಿರುವ ಮಹಾರಾಷ್ಟ್ರದ ಹೊಸ ಸರ್ಕಾರದಲ್ಲಿ ಇಂದು ಮಹಾರಾಷ್ಟ್ರ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮವನ್ನು ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಿ ಬಳಕೆಯಾಗಲಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ; ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ; ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್; ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್; ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ಮಧ್ಯಪ್ರದೇಶದ ಸಿಎಂ ಕಮಲ್‌ ನಾಥ್‌ ಸೇರಿದಂತೆ ಹಲವು ಮಂದಿಗೆ ಆಹ್ವಾನ ನೀಡಲಾಗಿದ್ದು ಬಹುತೇಕರು ಭಾಗವಹಿಸುವ ನಿರೀಕ್ಷೆ ಇದೆ.

ಅಲ್ಲದೇ ಸಮಾರಂಭಕ್ಕೆ ಮಹಾರಾಷ್ಟ್ರ ವಿಕಾಸ್‌ ಆಘಾಡಿ ವತಿಯಿಂದ ದೇಶಾದ್ಯಂತ ಹಿರಿಯ ಮುಖಂಡರಿಗೆ ಆಹ್ವಾನಗಳನ್ನು ಕಳುಹಿಸಿದೆ. ಶಿವಸೇನೆಯು ರಾಜ್ಯದ 400 ರೈತರು ಮತ್ತು ಕೃಷಿ ಬಿಕ್ಕಟ್ಟಿನಿಂದ ಸಾವನ್ನಪ್ಪಿದ ರೈತರ ಸಂಬಂಧಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.

ಶಿವಸೇನೆಯ ಶಾಸಕ ಆದಿತ್ಯ ಠಾಕ್ರೆ ಮತ್ತು ಪಕ್ಷದ ಕಾರ್ಯದರ್ಶಿ ಮಿಲಿಂದ್ ನರ್ವೆಕರ್ ಅವರೊಂದಿಗೆ ಉದ್ಧವ್ ಠಾಕ್ರೆ ಅವರ ಆಪ್ತರು ಬುಧವಾರ ಸಂಜೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ಗುರುವಾರ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆಯವರು ಸಂಜೆ 6.40 ಕ್ಕೆ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದೇ ಜಾಗದಲ್ಲಿ ಅವರ ತಂದೆ ದಿವಂಗತ ಬಾಳ್‌ ಠಾಕ್ರೆಯವರು 1966 ರಲ್ಲಿ ಶಿವಸೇನೆ ಸ್ಥಾಪಿಸಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, ಉದ್ಧವ್ ಠಾಕ್ರೆ ಅವರ ಸೋದರಸಂಬಂಧಿ ಮಹಾರಾಷ್ಟ್ರ ನವನಿರ್ಮಾಣ್‌ ಸೇನೆಯ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಮಾರಂಭದಲ್ಲಿ ರಾಜ್ ಠಾಕ್ರೆ ಹಾಜರಾಗುವ ಸಾಧ್ಯತೆ ಇದ್ದರೂ, ಮೋದಿ ಬರುವುದಿಲ್ಲ ಎಂದು ಶಿವಸೇನೆಯ ಮುಖಂಡರೊಬ್ಬರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಬಿಜೆಪಿಗೂ ಒಂದು‌‌ ಕೈ‌ ಮಿಗಿಲಾದ ಕಟು ಹಿಂದುತ್ವವಾದಿ ಪಕ್ಷ “ಸೇನೆ”. ಅದು ಹೇಗೆ‌ ಮಹಾತ್ಮರಿಂದ ಕಟ್ಟಲ್ಪಟ್ಟ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ‌ಪಕ್ಷ ಅದರೊಂದಿಗೆ‌ ಕೈ ಜೋಡಿಸಿದೆ? ಇದು ಎಂದಾದರೂ‌ ಊರ್ಜಿತ ಆಗಬಹುದೇ?

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...