Homeಕರ್ನಾಟಕವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

- Advertisement -
- Advertisement -

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸಹಿತ ಮೂವರನ್ನು ಅಮಾನತು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್‌.ಸಿ ಮಹದೇವಪ್ಪ ತಿಳಿಸಿದ್ದಾರೆ.

ತಪ್ಪಿತಸ್ಥ ವಸತಿಯ ಶಾಲೆಯ ಸಿಬ್ಬಂದಿಯನ್ನು ಅಮಾನತು ಮಾಡಿರುವ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಚಿವರು, ಈ ರೀತಿಯ ಘಟನೆಗಳು ನಡೆಯದಂತೆ ಮುಂದೆ ಎಚ್ಚರಿಕೆ ವಹಿಸಲಾಗುವುದು ಎಂದಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲುವಳ್ಳಿಯ ಮೊರಾರ್ಜಿ ದೇಸಾಯಿತಿ ವಸತಿ ಶಾಲೆಯ ಪ್ರಾಂಶುಪಾಲರಾದ ಭಾರತಮ್ಮ ಪಿ., ಪ್ರಭಾರ ನಿಯಮ ಪಾಲಕರಾದ ಮಂಜುನಾಥ್, ಚಿತ್ರಕಲಾ ಶಿಕ್ಷಕರಾದ ಮುನಿಯಪ್ಪ ವಿದ್ಯಾರ್ಥಿಗಳಿಂದ ಶಾಲಾ ಆವರಣ ಮತ್ತು ಇಂಗು ಗುಂಡಿಗಳನ್ನು ಸ್ವಚ್ಚತೆ ಮಾಡಿಸಿರುವ ಬಗ್ಗೆ ಹಾಗೂ ವಸತಿ ಶಾಲೆಯನ್ನು ಅಸಮರ್ಪಕವಾಗಿ ನಿರ್ವಹಣ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಕಾರ್ಯನಿರ್ವಾಹಕ ನಿರ್ದೇಶಕ ಡಾ. ನವೀಕ್ ಕುಮಾರ್ ರಾಜು ಎಸ್‌ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ?

ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲುವಳ್ಳಿಯ ಮೊರಾರ್ಜಿ ದೇಸಾಯಿತಿ ವಸತಿ ಶಾಲೆಯಲ್ಲಿ ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡಸಲಾಗಿದೆ. ಪ್ರಾಂಶುಪಾಲರು ಹಾಗೂ ಶಿಕ್ಷಕರೊಬ್ಬರ ಸಮ್ಮುಖದಲ್ಲಿ 7-9ನೇ ತರಗತಿಯ ಐದಾರು ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿರುವ ಆರೋಪ ಕೇಳಿ ಬಂದಿದೆ. ಮಕ್ಕಳು ಶೌಚ ಗುಂಡಿಯೊಳಗಿರುವ ಫೋಟೊಗಳನ್ನು ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿಯಲಾಗಿದೆ. ಇದೀಗ ಪೋಟೋಗಳು ಭಾರೀ ವೈರಲ್‌ ಆಗಿದೆ.

ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿದೆ. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಶಿಕ್ಷಕರು ಹೇಳುತ್ತಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು,  ವಿಚಾರ ತಿಳಿದು  ವಸತಿ ನಿಲಯಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇನೆ. ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು. ಈ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ವರದಿ ನೀಡಿದ್ದೇನೆ. ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು  ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಸೂಚನೆ ನೀಡಿದ್ದೇನೆ. ಮಕ್ಕಳನ್ನು ಛೇಂಬರ್ ಒಳಗೆ ಇಳಿಸಿದವರು ಮತ್ತು ಮಕ್ಕಳಿಗೆ ರಾತ್ರಿ ವೇಳೆ ಹಿಂಸೆ ನೀಡಿರುವ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲಿತ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ: ಕೋಲಾರದ ವಸತಿ ಶಾಲೆಯಲ್ಲಿ ಘಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...