Homeಅಂತರಾಷ್ಟ್ರೀಯಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಖಚಿತಗೊಂಡಿದೆ. ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ಶುಕ್ರವಾರ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚಿನ ಪದಕ ಗೆದ್ದಿರುವ 23 ವರ್ಷದ ಲವ್ಲಿನಾ ಅವರು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಅಸ್ಸಾಂ ರಾಜ್ಯದವರಾಗಿರುವ ಬಾಕ್ಸರ್ ಲವ್ಲಿನಾ ಅವರಿಗೆ ಚಿನ್ನದ ಪದಕ ಪಡೆಯಲು ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಸಮೀಫೈನಲ್‌ ಪ್ರವೇಶಿಸಿರುವ ಅವರು ಒಂದು ಪಂದ್ಯವನ್ನು ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಪಿವಿ ಸಿಂಧು, ಬಾಕ್ಸರ್‌‌ ಸತೀಶ್‌, ಪುರುಷರ ಹಾಕಿ ತಂಡ ಕ್ವಾಟರ್‌ ಫೈನಲ್‌ಗೆ

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಗುತ್ತಿರುವ ಮೂರನೇ ಪದಕ ಇದಾಗಿದೆ. ಭಾರತದ ಹಿಂದಿನ ಬಾಕ್ಸಿಂಗ್ ಪದಕಗಳು ವಿಜೇಂದರ್ ಸಿಂಗ್ (2008) ಮತ್ತು ಎಂಸಿ ಮೇರಿ ಕೋಮ್ (2012) ಮೂಲಕ ಬಂದಿವೆ. ಈ ಇಬ್ಬರೂ ಕಂಚಿನ ಪದಕಗಳನ್ನು ಗೆದ್ದಿದ್ದು, ಲವ್ಲೀನಾ ಅವರಿಗೆ ಅವಬ್ಬರಿಗಿಂತಲೂ ಉತ್ತಮ ಸಾಧನೆ ಮಾಡುವ ಅವಕಾಶವಿದೆ.

ಗುರುವಾರ ನಡೆದ ಬ್ಯಾಡ್ಮಿಂಟನ್‌‌ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ನೇರ ಪಂದ್ಯಗಳಲ್ಲಿ ಸೋಲಿಸಿದ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳಾ ಸಿಂಗಲ್ಸ್ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಇಂದು ಅವರು ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಕ್ವಾರ್ಟರ್‌ ಪೈನಲ್‌ನಲ್ಲಿ ಎದುರಿಸಲಿದ್ದಾರೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಜೊತೆಗೆ ಗುರುವಾರ ನಡೆದ ಪುರುಷರ ಹಾಕಿ ಪೂಲ್‌ ಎ ಪಂದ್ಯಾಟದಲ್ಲಿ ಅರ್ಜೆಂಟೀನ ವಿರುದ್ದ ಭಾರತ 3-1 ಅಂಕದಲ್ಲಿ ಗೆಲುವು ಸಾಧಿಸಿದೆ. ಇಂದು ಜಪಾನ್ ವಿರುದ್ದ ಭಾರತ ಸೆಣಸಲಿದೆ.

ಅಲ್ಲದೆ ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದಾರೆ. ಅವರ ಮುಂದಿನ ಪಂದ್ಯ ಶನಿವಾರ ಜಪಾನಿನ ತಕಹಾರು ಫುರುಕವ ಅವರ ವಿರುದ್ದ ನಡೆಯಲಿದೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...