Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ ಮುಗಿಯಲು ಇನ್ನು ಒಂದೇ ದಿನ ಬಾಕಿದೆ. ಈ ನಡುವೆ ಭಾರತದ ಕೊರಳಿಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ. 65 ಕೆಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ 8-0 ಅಂತರದಲ್ಲಿ ಭರ್ಜರಿಯಾಗಿ ಗೆದ್ದಿದ್ದಾರೆ.

ಸೆಮಿಫೈನಲ್‌ಗೆ ತಲುಪಿದ್ದ ಬಜರಂಗ್ ಪೂನಿಯಾ ಅವರು ಶುಕ್ರವಾರಂದು ಅಝರ್‌ಬೈಜಾನ್‌ ಹಾಜಿ ಅಲಿಯೇವ್ ಅವರ ವಿರುದ್ದ 5-12 ಅಂಕದಲ್ಲಿ ಸೋಲುಂಡಿದ್ದರು. ಇದರ ನಂತರ ಅವರು ಇಂದು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ ಹೋರಾಡಿ ಕಂಚು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

ಈ ಮಧ್ಯೆ, ಗಾಲ್ಫ್ ಕ್ರೀಡೆಯಲ್ಲಿ ಕರ್ನಾಟಕ ಮೂಲದ ಗಾಲ್ಫರ್ ಅದಿತಿ ಅಶೋಕ್ ಅವರು ನಾಲ್ಕನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಶ್ಲಾಘನೆ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ.

ಈ ನಡುವೆ ಜಾವೆಲಿನ್ ಥ್ರೋ ಪಂದ್ಯಾಟ ನಡೆಯುತ್ತಿದ್ದು, ಭಾರತದ ನೀರಜ್‌ ಚೋಪ್ರಾ ಅವರು ಅಗ್ರ ಸ್ಥಾನವನ್ನು ಕಾಯ್ದು ಕೊಂಡಿದ್ದಾರೆ. ಅವರ ಮೂಲಕ ಭಾರತಕ್ಕೆ ಟೋಕಿಯೊ ಪಂದ್ಯಾಟದಲ್ಲಿ ಮೊದಲ ಚಿನ್ನ ಸಿಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...