ಟೋಕಿಯೊ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಗುರುವಾರ ನಡೆದ ಪಂದ್ಯಗಳಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ನೇರ ಪಂದ್ಯಗಳಲ್ಲಿ ಸೋಲಿಸಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
2016 ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದ 26 ವರ್ಷದ ಪಿ.ವಿ. ಸಿಂಧು, 41 ನಿಮಿಷಗಳ ಪಂದ್ಯದಲ್ಲಿ 13 ನೇ ಶ್ರೇಯಾಂಕದ ಮಿಯಾ ಬ್ಲಿಚ್‌ಫೆಲ್ಡ್ ವಿರುದ್ಧ 21-15, 21-13 ಅಂತರದ ಗೆಲುವು ಸಾಧಿಸಿದರು.
ಸಿಂಧು ಮುಂದಿನ ಪಂದ್ಯದಲ್ಲಿ ಜಪಾನ್‌ನ ಅಕಾನೆ ಯಮಗುಚಿ ಮತ್ತು ಕೊರಿಯಾದ ಕಿಮ್ ಗೇನ್ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.
ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು
ಬಾಕ್ಸಿಂಗ್‌ನಲ್ಲಿ ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪುರುಷರ ಪೂಲ್ ಎ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ವಿರುದ್ಧ 3-1ಗೋಲುಗಳ ಅಂತರದಿಂದ ಗೆದ್ದ ಭಾರತೀಯ ಪುರುಷರ ಹಾಕಿ ತಂಡವು ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದಿದೆ.
ಈ ಮಧ್ಯೆ ಪುರುಷರ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್ ಫೈನಲ್‌ಗೆ ತಲುಪಿದ್ದಾರೆ.
ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತ ಯಾವುದೆ ಪದಕಗಳನ್ನು ಗೆದ್ದಿಲ್ಲ.
ಇದನ್ನೂ ಓದಿ: ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್


