Homeಕರ್ನಾಟಕಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ನಿತ್ಯ ಸಂಚರಿಸುವ ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಬೀಳಲಿದೆ.

ನಂದಿ ಎಕನಾಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಸಂಸ್ಥೆಯು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಯಡಿ ಬರುವ ತನ್ನ ಪೆರಿಫೆರಲ್ ಮತ್ತು ಲಿಂಕ್ ರಸ್ತೆಗಳ ಟೋಲ್ ದರವನ್ನು ಸರಾಸರಿ ಶೇಕಡಾ 10% ರಷ್ಟು ಹೆಚ್ಚಿಸಿದೆ. 

ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ ಸಾಗುವ 40.8 ಕಿ.ಮೀ ಉದ್ದದ ಪೆರಿಫೆರಲ್ ರಸ್ತೆ ಹಾಗೂ 8.1 ಕಿ.ಮೀ ಉದ್ದದ ಲಿಂಕ್ ರಸ್ತೆಯಲ್ಲಿ ಚಲಿಸುವ ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಇಂದಿನಿಂದ ಕನಿಷ್ಠ ಶೇ. 10% ರಷ್ಟು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಲೆಕ್ಕಾಚಾರದ ಸುಲಭಕ್ಕಾಗಿ ಹೆಚ್ಚುವರಿ ಮೊತ್ತವನ್ನು ಮುಂದಿನ ರೌಂಡ್ ಫಿಗರ್ ಸಂಖ್ಯೆಗೆ ಪೂರ್ಣಗೊಳಿಸಲಾಗಿದೆ. ಇದು ರಾಜ್ಯ ಸರ್ಕಾರದೊಂದಿಗಿನ ಒಪ್ಪಂದದ ಪ್ರಕಾರ ನಡೆಯುವ ವಾರ್ಷಿಕ ದರ ಪರಿಷ್ಕರಣೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

ನೈಸ್ ರಸ್ತೆ ಮೂಲಕ ಬನಶಂಕರಿ, ತಾವರೆಕೆರೆ, ಎಲೆಕ್ಟ್ರಾನಿಕ್ಸ್ ಸಿಟಿ ಭಾಗಗಳಿಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳಿಗೂ ಈ ದರ ಏರಿಕೆ ಅನ್ವಯವಾಗುವುದರಿಂದ, ಸಂಸ್ಥೆಯು ಈ ಹೊರೆಯನ್ನು ಟಿಕೆಟ್ ದರ ಹೆಚ್ಚಳದ ಮೂಲಕ ಸಾರ್ವಜನಿಕ ಪ್ರಯಾಣಿಕರ ಮೇಲೆಯೇ ಹಾಕುವ ಸಾಧ್ಯತೆ ದಟ್ಟವಾಗಿದೆ.

ಮತ್ತೊಂದೆಡೆ, ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗಿನ 9.98 ಕಿಮೀ ಉದ್ದದ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಮತ್ತು ಕರ್ನಾಟಕ-ತಮಿಳುನಾಡು ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ 44 ರ ಟೋಲ್ ದರವನ್ನು ಬೆಂಗಳೂರು ಎಲಿವೇಟೆಡ್ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ (BETPL) ಪರಿಷ್ಕರಿಸಿದೆ. ಸಗಟು ಬೆಲೆ ಸೂಚ್ಯಂಕದ (WPI) ಆಧಾರದ ಮೇಲೆ ಮಾಡಲಾಗಿರುವ ಈ ದರ ಪರಿಷ್ಕರಣೆಯು ಜೂನ್ 30, 2027 ರವರೆಗೆ ಜಾರಿಯಲ್ಲಿರಲಿದೆ.

ಹೊಸ ನಿಯಮದ ಪ್ರಕಾರ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ನಲ್ಲಿ ಕಾರು, ಜೀಪ್ ಮತ್ತು ವ್ಯಾನ್‌ಗಳ ಏಕಮುಖ (ಒನ್-ವೇ) ಸಂಚಾರದ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ದಿನದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಸಂಚರಿಸುವ ‘ಮಲ್ಟಿಪಲ್ ಜರ್ನಿ’ ಶುಲ್ಕವನ್ನು 95 ರೂಪಾಯಿಯಿಂದ 100 ರೂಪಾಯಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಮಾಸಿಕ ಪಾಸ್ ದರವನ್ನು 1,885 ರೂಪಾಯಿಯಿಂದ 1,960 ರೂಪಾಯಿಗೆ ಏರಿಸಲಾಗಿದ್ದು, ನಿತ್ಯ ಓಡಾಡುವ ಐಟಿ ಉದ್ಯೋಗಿಗಳಿಗೆ ಪ್ರತಿ ತಿಂಗಳು 75 ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ದ್ವಿಚಕ್ರ ವಾಹನ ಸವಾರರ ಒನ್-ವೇ ಹಾಗೂ ಮಲ್ಟಿಪಲ್ ಟೋಲ್ ದರ ಯಥಾಸ್ಥಿತಿ ಮುಂದುವರಿದಿದ್ದರೂ, ಅವರ ಮಾಸಿಕ ಪಾಸ್ ದರವನ್ನು 755 ರೂಪಾಯಿಯಿಂದ 785 ರೂಪಾಯಿಗೆ ಹೆಚ್ಚಿಸಲಾಗಿದೆ.

ಇದೇ ವೇಳೆ, ಹೊಸೂರು ರಸ್ತೆಯ ಅತ್ತಿಬೆಲೆ ಟೋಲ್ ಪ್ಲಾಜಾದಲ್ಲಿಯೂ ದರ ಏರಿಕೆಯಾಗಿದ್ದು, ಕಾರು ಮತ್ತು ಜೀಪ್‌ಗಳ ದಿನದ ಮಲ್ಟಿಪಲ್ ಪ್ರಯಾಣದ ಶುಲ್ಕವನ್ನು 55 ರೂಪಾಯಿಯಿಂದ 60 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಒಂದೇ ದಿನ ಮೂರು ಪ್ರಮುಖ ಮಾರ್ಗಗಳ ಟೋಲ್ ದರಗಳು ದುಬಾರಿಯಾಗಿರುವುದು ಕಚೇರಿ ಕೆಲಸಗಳಿಗಾಗಿ ನಿತ್ಯ ಸಂಚರಿಸುವ ಮಧ್ಯಮ ವರ್ಗದ ವಾಹನ ಸವಾರರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...