Homeಮುಖಪುಟವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

- Advertisement -
- Advertisement -

ರೈತರು ಒಂದು ವರ್ಷ ನಡೆಸಿದ ಹೋರಾಟದ ಫಲವಾಗಿ ಬಂಡವಾಳಶಾಹಿಗಳ ಪರವಾದ ವಿವಾದಿತ ಕೃಷಿ ಕಾಯ್ದೆಗಳನ್ನು ಚುನಾವಣೆ ಹೊಸ್ತಿಲಲ್ಲಿ ವಾಪಸ್‌ ಪಡೆಯಲೇಬೇಕಾದ ಇಕ್ಕಟ್ಟಿಗೆ ಕೇಂದ್ರ ಸರ್ಕಾರ ಸಿಲುಕಿದ್ದು ಈಗ ಇತಿಹಾಸ. ಇಷ್ಟೆಲ್ಲ ಆದರೂ ಮತ್ತೆ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಸೂಚನೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

“ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ” ಎಂದು ಕೃಷಿ ಸಚಿವರು ಹೇಳಿದ್ದಾರೆ.

“ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ತಿಳಿಸಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವ ಎರಡು ದಿನಗಳ ಮೊದಲು, ಸರ್ಕಾರವು ಟಿಪ್ಪಣಿಯನ್ನು ನೀಡಿತ್ತು. ತೋಮರ್ ಅವರು ಸಹಿ ಮಾಡಿದ ಆ ಟಿಪ್ಪಣಿಯಲ್ಲಿ “ರೈತರ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಕ್ಕೆ ರೈತರ ಗುಂಪೊಂದು ಅಡ್ಡಿಯಾಗಿದೆ” ಎಂದು ದೂಷಿಸಲಾಗಿತ್ತು.

ಸಾವಿರಾರು ರೈತರು ಒಂದು ವರ್ಷ ಕಾಲ ದೆಹಲಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದರು. ಹೀಗಾಗಿ ಸರ್ಕಾರ ಭಾರೀ ಮುಜುಗರವನ್ನು ಅನುಭವಿಸಬೇಕಾಯಿತು. ಪಂಜಾಬ್‌ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರೈತರ ಮತಗಳು ಅಗತ್ಯವಾಗಿ ಬೇಕಿರುವುದರಿಂದ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಾಯಿತು.

2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಕಾನೂನುಗಳನ್ನು ಪುನರುಜ್ಜೀವನಗೊಳಿಸಲು ಮತ್ತೆ ಪ್ರಯತ್ನಿಸಬಹುದು ಎಂದು ರಾಜಕೀಯ ವಿಮರ್ಶಕರು ಹೇಳುತ್ತಾರೆ.

ಪೊಲೀಸರ ಕ್ರಮಗಳಿಂದ ರೈತರು ಸತ್ತಿಲ್ಲ

ಚಳವಳಿಯ ವೇಳೆ ಸಾವನ್ನಪ್ಪಿದ ರೈತರ ಕುರಿತು ಹಿಂದೊಮ್ಮೆ ಹೇಳಿಕೆ ನೀಡಿದ್ದ ತೋಮರ್‌, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಅವರು ಹೇಳಿದ್ದರು. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದರು.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.


ಇದನ್ನೂ ಓದಿರಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...