Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...