Homeಮುಖಪುಟನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ನಾಳೆ ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದೆ.

“ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ದೇಶಾದ್ಯಂತ ತನಿಖಾ ಸಂಸ್ಥೆಯ ಸುಮಾರು 25 ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಳೆ ರಾಷ್ಟ್ರ ರಾಜಧಾನಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ರಾಹುಲ್‌ ಗಾಂಧಿ ಬರಲಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕರು ಮೆರವಣಿಗೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ‘ನಕಲಿ’ ಪ್ರಕರಣದಲ್ಲಿ ಸಿಲುಕಿಸಲು ಸರ್ಕಾರವು ಸಂಚು ರೂಪಿಸುತ್ತಿದೆ ಎಂದು ಟ್ಯಾಗೋರ್ ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ರಾಜಕೀಯ ವಿರೋಧಿಗಳನ್ನು ದುರ್ಬಲಗೊಳಿಸಲು ಜಾರಿ ಇ.ಡಿ. ಮತ್ತು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಅವರು ದೂರಿದ್ದಾರೆ.

ತನ್ನ ನಾಯಕರ ಮೇಲಿನ ಆರೋಪಗಳು “ನಕಲಿ ಮತ್ತು ಆಧಾರ ರಹಿತ” ಎಂದು ಕಾಂಗ್ರೆಸ್‌ ಸಮರ್ಥಿಸಿಕೊಂಡಿದೆ. ಸಮನ್ಸ್‌ಗಳು ಬಿಜೆಪಿಯ “ಸೇಡಿನ ರಾಜಕೀಯ”ದ ಭಾಗವಾಗಿವೆ ಎಂದು ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿರಿ: ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ದೇಶಾದ್ಯಂತ ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಜೆಪಿಯ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ಎಂದು ಪಕ್ಷದ ನಾಯಕರು ಹೇಳಿಕೆ ನೀಡಿದ್ದಾರೆ.

ವಿಚಾರಣೆಗೆ ಸಮನ್ಸ್ ಪಡೆದಿರುವ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...