Homeಚಳವಳಿನಾಳೆ ರೈತರಿಂದ ರೈಲ್ ರೋಕೋ ಚಳವಳಿ: ಭದ್ರತೆ ಬಿಗಿಗೊಳಿಸಿದ ರೈಲ್ವೆ ಇಲಾಖೆ

ನಾಳೆ ರೈತರಿಂದ ರೈಲ್ ರೋಕೋ ಚಳವಳಿ: ಭದ್ರತೆ ಬಿಗಿಗೊಳಿಸಿದ ರೈಲ್ವೆ ಇಲಾಖೆ

ಫೆ. 18 ರಂದು ದೇಶಾದ್ಯಂತ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲು ತಡೆ ನಡೆಸುವ ಮೂಲಕ ಹೋರಾಟ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಕರೆ ನೀಡಲಾಗಿರುವ ರೈಲ್ ರೋಕೋ ಚಳವಳಿ ಹಿನ್ನೆಲೆ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿದೆ.

ಫೆಬ್ರವರಿ 18 ರಂದು ದೇಶಾದ್ಯಂತ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ರೈಲು ತಡೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಡಾ. ದರ್ಶನ್ ಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ಫೆಬ್ರವರಿ 10 ರಂದು ತಿಳಿಸಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸುತ್ತಿರುವ ಪ್ರತಿಭಟನಾಶೀಲ ರೈತ ಸಂಘಗಳ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕಳೆದ ವಾರ ರೈಲ್ವೆ ತಡೆಯನ್ನು ಘೋಷಿಸಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಗೆ ಒತ್ತಾಯಿಸಿತ್ತು.

ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, “ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ನಾವು ಜಿಲ್ಲಾಡಳಿತಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಎಲ್ಲಾ ಸ್ಥಳದಲ್ಲಿ ಒಂದೊಂದು ನಿಯಂತ್ರಣ ಕೊಠಡಿ ಇರುತ್ತವೆ” ಎಂದು ಹೇಳಿದ್ದಾರೆ.

“ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ಮತ್ತು ಇತರ ಕೆಲವು ಪ್ರದೇಶಗಳು ನಮ್ಮ ಕೇಂದ್ರಬಿಂದುವಾಗಿರುತ್ತವೆ. ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ನ 20 ಪಡೆಗಳನ್ನು (ಸುಮಾರು 20,000 ಸಿಬ್ಬಂದಿ) ಈ ಪ್ರದೇಶಗಳಲ್ಲಿ ನಿಯೋಜಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

Image result for rail roko
PC: IANS

“ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ನಾವು ಪ್ರತಿಭಟನಾಕಾರರ ಮನವೊಲಿಸಲು ಬಯಸುತ್ತೇವೆ. ನಮಗೆ ನಾಲ್ಕು ಗಂಟೆಗಳ ಅವಕಾಶ ಇದೆ ಮತ್ತು (ರೈಲ್ ರೋಕೋ) ಶಾಂತಿಯುತವಾಗಿ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕ ಅರುಣ್ ಕುಮಾರ್ ಹೇಳಿದ್ದಾರೆ.

ಪಂಜಾಬಿನಲ್ಲಿ ಕಳೆದ ಸೆಪ್ಟಂಬರ್ 25 ರಿಂದ ರೈಕ್ ರೋಕೋ ಚಳುವಳಿ ಆರಂಭವಾಗಿತ್ತು. ಮುಖ್ಯಮಂತ್ರಿಗಳ ಮನವಿ ಹಿನ್ನೆಲೆಯಲ್ಲಿ ರೈಲ್ ರೋಕೋ ನಿಲ್ಲಿಸಲಾಗಿತ್ತು. ಆದರೆ ಸಂಯುಕ್ತ ಕಿಸಾನ್ ಮಜ್ದೂರ್‍ ಸಂಘರ್ಷ ಕಮಿಟಿಯು ಇನ್ನು ರೈಲ್ ರೋಕೋವನ್ನು ಮುಂದುವರೆಸಿದೆ. ಈಗ ಮತ್ತೆ ಸಂಯುಕ್ತ ಕಿಸಾನ್ ಮೋರ್ಚಾ ನಾಳೆ (ಫೆ.18) ದೇಶಾದ್ಯಂತ ರೈಲ್ ರೋಕೋಗೆ ಕರೆ ನೀಡಿದೆ.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...