Homeಮುಖಪುಟನಾಳೆಯೇ ಉದ್ಧವ್‌ ಠಾಕ್ರೆ ಪ್ರಮಾಣ ವಚನ: ಎರಡು ದಿನದಲ್ಲಿ ಖಾತೆ ಹಂಚಿಕೆ

ನಾಳೆಯೇ ಉದ್ಧವ್‌ ಠಾಕ್ರೆ ಪ್ರಮಾಣ ವಚನ: ಎರಡು ದಿನದಲ್ಲಿ ಖಾತೆ ಹಂಚಿಕೆ

- Advertisement -
- Advertisement -

ಉದ್ಧವ್ ಠಾಕ್ರೆ ನಾಳೆ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಜೆ 6.40 ಕ್ಕೆ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಮೊದಲು ಡಿಸೆಂಬರ್‌ 1 ರಂದು ಕಾರ್ಯಕ್ರಮ ನಡೆಯುವುದಾಗಿ ಘೋಷಿಸಲಾಗಿದ್ದು, ಬದಲಾವಣೆಯಾಗಿದ್ದು ನಾಳೆಯೇ ನಡೆಯಲಿದೆ.

ಉಪಮುಖ್ಯಮಂತ್ರಿಗಳು ಸೇರಿದಂತೆ ಹೊಸ ಮಹಾರಾಷ್ಟ್ರ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಸಚಿವ ಸ್ಥಾನಗಳ ಹಂಚಿಕೆಯನ್ನು “ಒಂದೆರಡು ದಿನಗಳಲ್ಲಿ ನಿರ್ಧರಿಸಲಾಗುವುದು” ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಬಾಲಾಸಾಹೇಬ್ ಥೋರತ್ ಹೇಳಿದ್ದಾರೆ.

ಮಹಾರಾಷ್ಟ್ರದ 43 ಸಚಿವ ಸ್ಥಾನಗಳನ್ನು ಮೂರು ಪಕ್ಷಗಳ ನಡುವೆ ವಿಂಗಡಿಸುವ ಚರ್ಚೆ ನಡೆಯುತ್ತಿದೆ. ಸದ್ಯದ ಮಟ್ಟಿಗೆ ಶಿವಸೇನೆಗೆ 15, ಎನ್‌ಸಿಪಿಗೆ 15 ಮತ್ತು ಕಾಂಗ್ರೆಸ್‌ಗೆ 12 ಸಚಿವ ಸ್ಥಾನಗಳು ಸಿಗಲಿವೆ. ಆದರೆ ಸಣ್ಣ ಪಕ್ಷಗಳಾದ ಸ್ವಾಭಿಮಾನಿ ಸಂಗಥಾನ ಮತ್ತು ಸಮಾಜವಾದಿ ಪಕ್ಷಕ್ಕೂ ಅವಕಾಶ ಕಲ್ಪಿಸಬೇಕಾಗಿದೆ.

ಗೃಹ, ಹಣಕಾಸು ಮತ್ತು ಕಂದಾಯ ಇಲಾಖೆ ಸೇರಿದಂತೆ ದೊಡ್ಡ ಸಚಿವಾಲಯಗಳನ್ನು ಯಾರು ಪಡೆಯುತ್ತಾರೆ ಎಂಬುದರ ಬಗ್ಗೆ ಇನ್ನು ಯಾವುದೇ ಒಪ್ಪಂದವಾಗಿಲ್ಲ. ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ.

“ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾದರೆ, ಕಾಂಗ್ರೆಸ್ ನಿಂದ ಬಾಲಾಸಾಹೇಬ್ ಥೋರತ್ ಮತ್ತು ಎನ್‌ಸಿಪಿಯಿಂದ ಜಯಂತ್ ಪಾಟೀಲ್ ಅವರು ಉಪಮುಖ್ಯಮಂತ್ರಿಗಳಾಗಲಿದ್ದಾರೆ” ಎಂದು ಎನ್‌ಸಿಪಿಯ ಮಜೀದ್ ಮೆಮನ್ ಹೇಳಿದ್ದಾರೆ.

ಆದರೆ ಥೋರತ್‌ರವರು “ಇನ್ನೂ ಅಂತಹ ಯಾವುದೇ ನಿರ್ಧಾರ ಮಾಡಿಲ್ಲ. ಅಂತಹ ಯಾವುದೇ ಸಾಧ್ಯತೆಯ ಬಗ್ಗೆ ನನಗೆ ತಿಳಿದಿಲ್ಲ. ಅಂತಹ ಉಹಾಪೋಹಗಳ ಬಗ್ಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಶಿವಸೇನೆ ಮತ್ತು ಯಾವಾಗಲೂ ವರ್ಣಪಟಲದ ವಿರುದ್ಧ ಬದಿಗಳಲ್ಲಿರುವ ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡಲು ಸಹಾಯ ಮಾಡುವ ಸಾಮಾನ್ಯ ಕನಿಷ್ಠ ಕಾರ್ಯಸೂಚಿಯನ್ನು ಮೈತ್ರಿ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಭಾವೀ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರು ವಿಧಾಸ ಸಭೆಯ ಸದಸ್ಯರಾಗದ ಕಾರಣದಿಂದ ವಿಧಾನ ಪರಿಷತ್ತಿನ ಸದಸ್ಯರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...