Homeಮುಖಪುಟಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

ಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ಬೆಂಗಳೂರಿನ ತಮ್ಮ ಮನೆಯಿಂದ ಬಂಧಿಸಲ್ಪಟ್ಟಿದ್ದ ಪರಿಸರ ಕಾರ್ಯಕರ್ತೆ ದಿಶಾ ರವಿಗೆ ದೆಹಲಿಯ ಸೆಷನ್ ಕೋರ್ಟ್ ಇಂದು ಜಾಮೀನು ನೀಡಿದೆ.

ಫೆಬ್ರವರಿ 20 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. 1 ಲಕ್ಷ ರೂ ಗಳ ಎರಡು ಬಾಂಡ್‌ನೊಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

“ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರಿಗೆ ಕೇಳಿತ್ತು.

ಪಟಿಯಾಲ ಹೌಸ್‌ ಕೋರ್ಟ್ ಕಾಂಪ್ಲೆಕ್ಸ್‌ನ ಹೆಚ್ಚುವರಿ ಸೆಷನ್ ನ್ಯಾಯಾಧೀಶರಾದ ಧರ್ಮೇಂದರ್ ರಾಣಾರವರು ಫೆಬ್ರವರಿ 20 ರಂದು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಮುಂದೂಡಿದ್ದರು.


ಇದನ್ನೂ ಓದಿ: ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...