Homeಮುಖಪುಟ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಮೇಲೆ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಬಿತ್ ಪಾತ್ರಾ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಕಾಂಗ್ರೆಸ್ ದೆಹಲಿ ಪೊಲೀಸರಿಗೆ ದೂರು ನೀಡಿದೆ.

‘ಹೆಚ್ಚಿನ ತನಿಖೆಗಾಗಿ ಅವರಿಬ್ಬರಿಗೂ ಸಮನ್ಸ್ ಕಳಿಸಲಾಗಿದೆ’ ಎಂದು ರಾಯ್‌ಪುರ ಸಿವಿಲ್ ಲೈನ್ಸ್ ಪೊಲೀಸ್ ಎಸ್‌ಎಚ್‌ಒ ಆರ್.ಕೆ ಮಿಶ್ರಾ ಭಾನುವಾರ ತಿಳಿಸಿದ್ದಾರೆ. “ವೈಯಕ್ತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಇಲ್ಲಿಗೆ ಹಾಜರಾಗುವಂತೆ ಸಂಬಿತ್ ಪಾತ್ರಾರನ್ನು ಕೇಳಿದ್ದೇವೆ. ಛತ್ತೀಸಘಡ್ ಪ್ರದೇಶ ಕಾಂಗ್ರೆಸ್ ಎನ್‌ಎಸ್‌ಯುಐ ಅಧ್ಯಕ್ಷರು ದೂರು ದಾಖಲಿಸಿದ್ದಾರೆ” ಎಂದು ಮಿಶ್ರಾ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರೆದಿ ಮಾಡಿದೆ.

ಮಂಗಳವಾರ ಬಿಜೆಪಿಯು ಟೂಲ್‌ಕಿಟ್ ಆರೋಪದ ಮೇಲೆ ಕಾಂಗ್ರೆಸ್ ವಿರುದ್ಧ ಟ್ವೀಟ್ ಸಮರ ಸಾರಿತ್ತು. ಕೋವಿಡ್ ಬಿಕ್ಕಟ್ಟನ್ನು ಬಳಸಿ ಮೋದಿ ಮತ್ತು ಸರ್ಕಾರವನ್ನು ಹಣಿಯಲು ಕಾಂಗ್ರೆಸ್ ಉದ್ದೇಶಿಸಿತ್ತು ಎಂದು ಆರೋಪಿಸಿತ್ತು.

ಬಿಜೆಪಿ “ನಕಲಿ ಟೂಲ್‌ಕಿಟ್” ಅನ್ನು ಪ್ರಚಾರ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಲೆಟರ್‌ಹೆಡ್ ಫೋರ್ಜರಿ ಮಾಡಿದ್ದನ್ನು ಒಪ್ಪಿದ ಟ್ವೀಟರ್ ಕೂಡ ಬಿಜೆಪಿ ವಿರುದ್ಧ ಕ್ರಮ ಕೈಗೊಂಡಿತ್ತು. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ (ಎನ್‌ಎಸ್‌ಯುಐ) ರಾಜ್ಯ ಮುಖ್ಯಸ್ಥ ಆಕಾಶ್ ಶರ್ಮಾ ಅವರ ದೂರಿನ ಆಧಾರದ ಮೇಲೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ “ನಕಲಿ ಸುದ್ದಿ ಹರಡುವುದು” ಮತ್ತು “ಜನರ ನಡುವೆ ದ್ವೇಷವನ್ನು ಉತ್ತೇಜಿಸುವುದು” ಎಂಬ ಪ್ರಕರಣ ದಾಖಲಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ “ಟೂಲ್‌ಕಿಟ್” ಎಂದು ಹೇಳಲಾದ ಬಿಜೆಪಿಯ ಕೆಲವು ಪೋಸ್ಟ್‌ಗಳನ್ನು ಟ್ವಿಟರ್ “ತಿರುಚಿದ ಮಾಧ್ಯಮ” ಎಂದು ಟ್ಯಾಗ್ ಮಾಡಿದೆ. ಟ್ಯಾಗ್ ಆದವರಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಕೂಡ ಸೇರಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನಂತರ ಟ್ಯಾಗ್‌ಗೆ ಆಕ್ಷೇಪ ವ್ಯಕ್ತಪಡಿಸಿತು. ಪತ್ರವೊಂದರಲ್ಲಿ, ಸಚಿವಾಲಯವು ಟ್ವಿಟರ್‌ನ ಈ ಕ್ರಮವು “ಪೂರ್ವಾಗ್ರಹ ಪೀಡಿತ” ಮತ್ತು “ಅನಿಯಂತ್ರಿತ” ಎಂದು ಹೇಳಿತ್ತು.


ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...