Homeಮುಖಪುಟಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಆದರೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌‌ನಲ್ಲಿ ಅವರನ್ನೇ ಫಾಲೋ ಮಾಡುತ್ತಿದ್ದಾರೆ.

- Advertisement -
- Advertisement -

ಟ್ವಿಟ್ಟರ್‌ ಮಾದರಿಯ ಮೈಕ್ರೋಬ್ಲಾಂಗಿಗ್‌‌ ಸಾಮಾಜಿಕ ಜಾಲತಾಣವಾದ ಟೂಟರ್‌ನಲ್ಲಿ‌ ಪ್ರಧಾನಿ ಮೋದಿಯ ನಕಲಿ ಖಾತೆಯನ್ನು ತೆರೆಯಲಾಗಿದೆ ಎನ್ನಲಾಗಿದ್ದು, ಈ ಖಾತೆಗೆ ಟೂಟರ್ ಅಧಿಕೃತ ಎಂದು ತಿಳಿಸುವ ಬ್ಲೂಟಿಕ್ ನೀಡಿದೆ. ಆದರೆ ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೂಟರ್‌ನಲ್ಲಿ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.

ಟೂಟರ್‌ ತನ್ನನ್ನು ತಾನು “ಸ್ವದೇಶಿ ಸಾಮಾಜಿಕ ಜಾಲತಾಣ” ಎಂದು ಬಣ್ಣಿಸುತ್ತದೆ. ಅದರಲ್ಲಿ, ಪ್ರಧಾನಿ ನರೇಂದ್ರ ಮೋದಿಯದ್ದೆಂದು ಹೇಳಲಾಗಿರುವ ಬ್ಲೂಟಿಕ್ ಹೊಂದಿರುವ ಖಾತೆಯಿದೆ. ಅದರಲ್ಲಿ ಪ್ರಧಾನಿಯ ಚಿತ್ರ ಹಾಗೂ ಪೋಸ್ಟ್‌ಗಳನ್ನು ಹಂಚಲಾಗಿದೆ. ಆದರೆ, ಟೂಟರ್ ತನ್ನ ಬಳಕೆದಾರರನ್ನು ಹೇಗೆ ಪರಿಶೀಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಆರ್ಕೈವ್ ಇಲ್ಲಿದೆ. 

ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವೀಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳ ನಾಯಕರು ಫಾಲೋ ಮಾಡುತ್ತಿದ್ದಾರೆ.

“ಬಿಜೆಪಿಯ ಯಾವುದೇ ರಾಜ್ಯ ಘಟಕಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಟೂಟರ್‌ನಲ್ಲಿ ಇಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಅಮಿತ್ ಮಾಳವಿಯ ಟ್ವೀಟ್‌ಗೆ ಬಿಜೆಪಿಯ ಮತ್ತೊಬ್ಬ ವಕ್ತಾರ ಸುರೇಶ್ ನಖುವಾ ಕೂಡಾ ಧ್ವನಿ ಸೇರಿಸಿದ್ದಾರೆ. “ಅಮಿತ್‌ ಮಾಳವಿಯ ಅವರು ಗಣ್ಯರು ಟೂಟರ್‌‌ನಲ್ಲಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಈಗ ಈ ಬಗ್ಗೆ ಟೂಟರ್ ಸ್ಪಷ್ಟಪಡಿಸಬೇಕು. 1) ಯಾರ ಅನುಮತಿಯೊಂದಿಗೆ ಈ ಹ್ಯಾಂಡಲ್‌‌ಗಳನ್ನು ಮಾಡಲಾಗಿದೆ? 2) ಈ ಹ್ಯಾಂಡಲ್‌ಗಳನ್ನು ಹೇಗೆ ಪರಿಶೀಲಿಸಲಾಗಿದೆ? 3) ಈ ಹ್ಯಾಂಡಲ್‌ಗಳಿಗೆ ಯಾರು ಪೋಸ್ಟ್ ಮಾಡುತ್ತಿದ್ದಾರೆ ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ತಮಾಷೆಯೆಂದರೆ ”ಟೂಟರ್ ಜಾಲತಾಣದ”‌ನ ಟ್ವಿಟ್ಟರ್‌‌ ಖಾತೆಯನ್ನು ಪ್ರಧಾನಿ ಕಚೇರಿ, ಪ್ರಧಾನಿಯ ವೈಯಕ್ತಿಕ ಖಾತೆ, ಅಮಿತ್‌ ಶಾ, ಬಿಜೆಪಿಯ ಖಾತೆ, ಸಂಸದ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೆಲವು ಬಲಪಂಥಿಯ ವೆಬ್‌ಸೈಟ್‌ಗಳು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವಿಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯರು ಫಾಲೋ ಮಾಡುತ್ತಿದ್ದಾರೆ. ಅದರ ಆಕೈವ್ ಇಲ್ಲಿದೆ.‌

ಇದರ ಆರ್ಕೈವ್ ಇಲ್ಲಿದೆ.

ಕಳೆದ ವಾರ ಅಮೆರಿಕ ಸಂಸತ್ತಿನ ಮೇಲೆ ದಾಳಿ ನಡೆದು ಅಲ್ಲಿ ಹಿಂಸಾಚಾರವಾದ ನಂತರ ಟ್ವಿಟ್ಟರ್‌ ಗಲಭೆಗೆ ಟ್ರಂಪ್ ಪ್ರಚೋಚನೆ ನೀಡಿದ್ದಾರೆ ಎಂದು ಎಂದು ಹೇಳಿ ಅವರ ಟ್ವಿಟ್ಟರ್‌ ಖಾತೆಯನ್ನು ಶಾಶ್ವತವಾಗಿ ನಿಷೇಧ ಹೇರಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಟ್ವಿಟ್ಟರ್‌ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...