Homeಕರ್ನಾಟಕಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

ಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

- Advertisement -
- Advertisement -

1. ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!ಕೇಂದ್ರದ ವಿವಾದಾತ್ಮಕಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ರೈತರ ಪ್ರತಿಭಟನೆ 25ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟಕ್ಕೆ ಹಲವೆಡೆಯಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ ತಮ್ಮ ದಿಟ್ಟ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.(ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

2. ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನ ವಿವಾದ: ಸ್ಪಷ್ಟನೆ ನೀಡಿದ ಬಿಎಸ್‌ವೈ, ಎಚ್‌ಡಿಕೆರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನವಾಗಲಿದೆ ಎಂಬ ಊಹಪೋಹಗಳಿಗೆ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ, ವಿಲೀನ ಇಲ್ಲ ಎಂದು ತಿಳಿಸಿದ್ದಾರೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

3. ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ - ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಇಲ್ಲಿ ಮಸೀದಿ ನಿರ್ಮಾಣಕ್ಕೆಂದು ನೀಡಿರುವ 5 ಎಕರೆ ಭೂಮಿಯಲ್ಲಿ ಬಾಬರಿ ಮಸೀದಿಗಿಂತ 4 ಪಟ್ಟು ದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಈ ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆಯೂ ನಿರ್ಮಾಣವಾಗಲಿದೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

4.ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

5. ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!ಗುರುದ್ವಾರಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...