Homeಮುಖಪುಟಉನ್ನತ‌ ನ್ಯಾಯಾಧೀಶರು ಹೈಕೋರ್ಟ್‌ ಕೆಲಸದ ಮೇಲೆ ಪ್ರಭಾವ ಬೀರುತ್ತಿದ್ದಾರೆ: ಜಗನ್ ಮೋಹನ್ ರೆಡ್ಡಿ

ಉನ್ನತ‌ ನ್ಯಾಯಾಧೀಶರು ಹೈಕೋರ್ಟ್‌ ಕೆಲಸದ ಮೇಲೆ ಪ್ರಭಾವ ಬೀರುತ್ತಿದ್ದಾರೆ: ಜಗನ್ ಮೋಹನ್ ರೆಡ್ಡಿ

"ಪ್ರತಿಪಕ್ಷ ತೆಲುಗು ದೇಶಂ ಪಕ್ಷದ ಮೇಲಿನ ಪ್ರಮುಖ ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ಕೆಲವು ನ್ಯಾಯಾಧೀಶರಿಗೆ ಹಂಚಲಾಗಿದೆ"

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ಸೇರಿದಂತೆ ಕೆಲವು ನ್ಯಾಯಾಧೀಶರ ಹೆಸರನ್ನು ಉಲ್ಲೇಖಿಸಿ, ಇವರು ರಾಜ್ಯ ಹೈಕೋರ್ಟ್‌ನ ಸಭೆಗಳಲ್ಲಿ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

“ಪ್ರತಿಪಕ್ಷ ತೆಲುಗು ದೇಶಂ ಪಕ್ಷದ ಮೇಲಿನ ಪ್ರಮುಖ ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ಕೆಲವು ನ್ಯಾಯಾಧೀಶರಿಗೆ ಹಂಚಲಾಗಿದೆ” ಎಂದು ಅಕ್ಟೋಬರ್ 6 ರಂದು ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಆಂಧ್ರಪ್ರದೇಶದ ಹೈಕೋರ್ಟ್‌ನ ಎರಡು ಪ್ರಮುಖ ತೀರ್ಪುಗಳ ಫಲಾನುಭವಿಗಳು ತೆಲುಗು ದೇಶಂ ಪಕ್ಷದ ಮುಖಂಡರು ಎಂದು ಜಗನ್‌ ಮೋಹನ್ ರೆಡ್ಡಿ ಹೇಳಿದ್ದು, ಹಿಂದಿನ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದಲ್ಲಿ ಎನ್.ವಿ.ರಮಣ ಕಾನೂನು ಸಲಹೆಗಾರ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು ಎಂದು ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಭ್ರಷ್ಟಾಚಾರ, ನೈಸರ್ಗಿಕ ಸಂಪನ್ಮೂಲಗಳನ್ನು ನಿರ್ದಯವಾಗಿ ಬರಿದಾಗಿಸುವ ಮತ್ತು ಹಿಂದಿನ ಸರ್ಕಾರದ ಆಳ್ವಿಕೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಭೂಮಿಯನ್ನು ಕಸಿದುಕೊಂಡ ಆರೋಪಗಳನ್ನು ಪರಿಶೀಲಿಸಲು ಕಳೆದ ವರ್ಷದ ಜೂನ್‌ನಲ್ಲಿ ಆಂಧ್ರಪ್ರದೇಶ ಸರ್ಕಾರವು ಉಪಸಮಿತಿಯನ್ನು ರಚಿಸಿತ್ತು. ಈ ಉಪಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಚಂದ್ರಬಾಬು ನಾಯ್ಡು ಮತ್ತು ಇತರರು ಸುಮಾರು 4,000 ಎಕರೆಗಳನ್ನು ಖರೀದಿಸಿ, ಅಕ್ರಮ ವಹಿವಾಟಿನಿಂದ ಸಾಕಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿತ್ತು” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಪಾಸ್ವಾನ್ ಮರಣದ ನಂತರ ಮೋದಿ ಕ್ಯಾಬಿನೆಟ್‌ನಲ್ಲಿ ಉಳಿದಿರುವುದು ಕೇವಲ ಒಬ್ಬ NDA ಮಿತ್ರರು!

“ಆಂಧ್ರಪ್ರದೇಶದ ನ್ಯಾಯಾಂಗ ತಟಸ್ಥತೆಯನ್ನು ಕಾಪಾಡಿಕೊಳ್ಳುವುದಕ್ಕೆ ಕ್ರಮ ಕೈಗೊಳ್ಳುವಂತೆ ಜಗನ್ ಮೋಹನ ರೆಡ್ಡಿ ಬೊಬ್ಡೆಗೆ ಒತ್ತಾಯಿಸಿದ್ದಾರೆ. ಮಾಜಿ ಕಾನೂನು ಅಧಿಕಾರಿ ಮತ್ತು ಇತರರಿಗೆ ಸಂಬಂಧಿಸಿದಂತೆ ಅಮರಾವತಿಯಲ್ಲಿ ಭೂ ವ್ಯವಹಾರ ಪ್ರಕರಣವೊಂದನ್ನು ವರದಿ ಮಾಡದಂತೆ ಹೈ ಕೋರ್ಟ್ ಮಾಧ್ಯಮಗಳಿಗೆ ಬೆದರಿಕೆ ಹಾಕಿದೆ” ಎಂದು ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಸಲಹೆಗಾರ ಅಜಯ ಕಲ್ಲಂ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಆಂಧ್ರಪ್ರದೇಶದ ಹೈಕೋರ್ಟ್ ವ್ಯವಹರಿಸುವ ವಿಷಯಗಳಲ್ಲಿ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ರಾಜ್ಯ ಸರ್ಕಾರ ಭಾರತದ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿದೆ” ಎಂದು ದಿ ಹಿಂದೂ ವರದಿ ಮಾಡಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...