Homeಮುಖಪುಟಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

ಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

- Advertisement -
- Advertisement -

ತೆರಿಗೆ ವಂಚಿಸುವ ಹಾಗೂ ರಹಸ್ಯ ಹೂಡಿಕೆಯನ್ನು ಬಯಲು ಮಾಡುವ ಪಂಡೋರಾ ಪೇಪರ್ಸ್‌ ಅನ್ನು  ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟ (ಸಿಐಸಿಜೆ) ಬಯಲು ಮಾಡಿದ್ದು ಭಾರತೀಯ ದಿಗ್ಗಜರ ಹೆಸರುಗಳು ಅದರಲ್ಲಿವೆ.

ವಿಶ್ವದ ಮಹಾನ್‌ ನಾಯಕರು, ಸಾರ್ವಜನಿಕ ಅಧಿಕಾರಿಗಳು, ಖ್ಯಾತನಾಮರ ಹೆಸರುಗಳು ಬಯಲಾಗಿವೆ. ಉದ್ಯಮಿಗಳ ಅನಿಲ್‌ ಅಂಬಾನಿ, ಕಿರಣ್‌ ಮಜುಂದಾರ್‌ ಷಾ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಹೆಸರು ಪಂಡೋರ ಹಗಣರಣದಲ್ಲಿ ಸೇರಿವೆ.

ತೆರಿಗೆ ವಂಚಿಸಲು ಇರುವ ಜಾಗತಿಕ ಅವಕಾಶಗಳನ್ನು ಇವರು ಬಳಸಿದ್ದಾರೆ. ಸರ್ಕಾರದ ಕಣ್ಣು ತಪ್ಪಿಸಿ ನಡೆಯುವ ವ್ಯವಹಾರಗಳ ಮಾಹಿತಿಯನ್ನು ತನಿಖಾ ಸಂಸ್ಥೆಗಳ ಭಾಗವಾದ ಇಂಡಿಯನ್‌ ಎಕ್ಸ್‌ಪ್ರೆಸ್ ಪತ್ರಿಕೆ ಬಯಲು ಮಾಡಿದೆ. ಹಣ ಹೂಡಿಕೆ ಮಾಡಿದ್ದಾರೆ ಎಂಬುದನ್ನು ಕಡಲಾಚೆಯ 14 ಸಂಸ್ಥೆಗಳು ಮಾಹಿತಿ ನೀಡಿದ್ದು, ಒಟ್ಟು 11.9 ಮಿಲಿಯನ್‌ ದಾಖಲೆಗಳ ಆಧಾರದಲ್ಲಿ ಹಗರಣವನ್ನು ಬಯಲಿಗೆಳೆಯಲಾಗಿದೆ.

ಈ ದಾಖಲೆಗಳು ವಾಷಿಂಗ್‌ಟನ್‌ ಮೂಲದ ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟದಿಂದ (ಸಿಐಸಿಜೆ) ಪಡೆಯಲಾಗಿದೆ. ಜಾಗತಿಕ ತನಿಖಾ ಪತ್ರಿಕೋದ್ಯಮ ಪಾಲುದಾರರಾದ ದಿ ಗಾರ್ಡಿಯನ್‌, ಬಿಬಿಸಿ ಪನೋರಮಾ ಮತ್ತು ವಾಷಿಂಗ್‌ಟನ್‌ ಪೋಸ್ಟ್‌, ಇಂಡಿಯನ್‌ ಎಕ್ಸ್‌ಪ್ರೆಸ್‌‌ ಸೇರಿದಂತೆ ಇತರ ಸಂಸ್ಥೆಗಳು ಪನೋಮ ಪೇಪರ್ಸ್‌ ಬಳಿಕ ಬಹುದೊಡ್ಡ ಹಗರಣವನ್ನು ಬಯಲಿಗೆಳೆದಿವೆ. ಇದನ್ನು ಸಿಐಸಿಜೆ ‘ಪಂಡೋರ ಪೇಪರ್ಸ್‌’ ಎಂದು ಕರೆಯಲಾಗಿದೆ. ಕಡಲಾಚೆಯ ಘಟಕಗಳೆಲ್ಲ ಕಾನೂನು ಬಾಹಿರವೇನಲ್ಲ. ಆದರೆ ತೆರಿಗೆ ವಂಚಕರು ಈ ಸ್ವರ್ಗಗಳನ್ನು ಹುಡುಕುತ್ತಾರೆ. ಈ ನಿಟ್ಟಿನಲ್ಲಿ ಪಂಡೋರ ಪೇಪರ್ಸ್‌, 2014ರ ಬಳಿಕ ಬಯಲಾದ ಅತಿದೊಡ್ಡ ದಾಖಲೆಯಾಗಿದೆ.

ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪ್ರತಿನಿಧಿಗಳು ಜರ್ಸಿ, ಬ್ರಿಟಿಷ್ ವರ್ಜಿನ್ ದ್ವೀಪಗಳು ಮತ್ತು ಸೈಪ್ರಸ್‌ನಲ್ಲಿ ಕನಿಷ್ಠ 18 ಕಡಲಾಚೆಯ ಕಂಪನಿಗಳನ್ನು ಹೊಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಇವುಗಳಲ್ಲಿ ಏಳು ಕಂಪನಿಗಳು ಕನಿಷ್ಠ 1.3 ಬಿಲಿಯನ್ ಡಾಲರ್‌ಗಳನ್ನು (ಸುಮಾರು ರೂ. 9,649 ಕೋಟಿ) ಎರವಲು ಮತ್ತು ಹೂಡಿಕೆ ಮಾಡಿವೆ ಎಂದು ವರದಿಯಾಗಿದೆ.

ಫೆಬ್ರವರಿ 2020ರಲ್ಲಿ, ಅಂಬಾನಿ ಅವರು ತಮ್ಮ ಹೂಡಿಕೆ ಕುರಿತು, “ನಿವ್ವಳ ಮೌಲ್ಯ ಶೂನ್ಯ” ಎಂದು ಲಂಡನ್‌ನ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದಾಗ್ಯೂ, “ಅಂಬಾನಿಯವರಿಗೆ ಯಾವುದೇ ಕಡಲಾಚೆಯ ಹಿತಾಸಕ್ತಿಗಳಿವೆ” ಎಂಬ ಪ್ರಶ್ನೆಗಳಿವೆ ಎಂದು ನ್ಯಾಯಾಲಯ ಕೇಳಿತ್ತು. ನ್ಯಾಯಾಲಯವು, ಮೂರು ಚೀನೀ ಬ್ಯಾಂಕುಗಳಿಗೆ 716 ಮಿಲಿಯನ್ ಡಾಲರ್‌‌ (ಸುಮಾರು ರೂ. 5,315 ಕೋಟಿ) ಪಾವತಿಸಲು ಆದೇಶಿಸಿತ್ತು. ಆದರೆ ಅದನ್ನು ಅಂಬಾನಿ ಪಾಲಿಸಿಲ್ಲ.

ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರ ಪತಿ ವಿದೇಶದಲ್ಲಿ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಅದರ ಹೊಣೆಯನ್ನು ಇನ್‌ಸೈಡರ್‌ ಟ್ರೇಡಿಂಗ್‌ಗಾಗಿ ಸೆಬಿಯಿಂದ ನಿಷೇಧಕ್ಕೆ ಒಳಗಾದ ವ್ಯಕ್ತಿಗೆ ನೀಡಲಾಗಿದೆ ಎಂದು ಪಂಡೋರ ಪೇಪರ್ಸ್‌ ವರದಿ ಮಾಡಿದೆ.

2016ರಲ್ಲಿ ಪನಾಮಾ ಪೇಪರ್‌ ಬಹಿರಂಗವಾದ ಬಳಿಕ ವಿದೇಶದಲ್ಲಿನ ತಮ್ಮ ಆಸ್ತಿಯನ್ನು ನಗದೀಕರಣ ಮಾಡುವಂತೆ ಸಚಿನ್‌ ಕೋರಿದ್ದರು ಎನ್ನಲಾಗಿದೆ. ಸಚಿನ್‌ ಅವರಂತೆಯೇ ಅನೇಕರು ಆಸ್ತಿ ನಗದೀಕರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿರಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...