Homeಕರ್ನಾಟಕಎಲ್ಲ ಪೊಲೀಸ್ ಠಾಣೆಗಳಲ್ಲೂ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಫಲಕ ಹಾಕಬೇಕು: ಡಿಜಿಪಿ ಸೂಚನೆ

ಎಲ್ಲ ಪೊಲೀಸ್ ಠಾಣೆಗಳಲ್ಲೂ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಫಲಕ ಹಾಕಬೇಕು: ಡಿಜಿಪಿ ಸೂಚನೆ

- Advertisement -
- Advertisement -

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ಹಾಕಿ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಒಂದು ಫಲಕವನ್ನು ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಅಲೋಕ್ ಮೋಹನ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರು ಹೊರಡಿಸಿದ ಸುತ್ತೋಲೆಯಲ್ಲಿ ”ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ಸಂಖ್ಯೆಗಳನ್ನು ನಮೂದಿಸುವ ಬೋರ್ಡ್ಅನ್ನು ಹಾಕಬೇಕು. ಇದರಿಂದ ಸಾರ್ವಜನಿಕರು ನೀಡಿದ ದೂರುಗಳಿಗೆ ಪೊಲೀಸರು ಸ್ಪಂದಿಸದಿದ್ದರೆ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಜನರಿಗೆ ಇದರಿಂದ ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ದೂರುಗಳನ್ನು ದೂರುಗಳನ್ನು ಸ್ವೀಕರಿಸದೇ ಹೋದಲ್ಲಿ ಪೊಲೀಸ್ ಮುಖ್ಯಸ್ಥರು, ಡಿಸಿಪಿ, ಎಸಿಪಿಯನ್ನು ಸಂಪರ್ಕಿಸಿ ಎಂದು ಬರೆದು, ದೂರವಾಣಿ ಸಂಖ್ಯೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನಮೂದಿಸಬೇಕು ಎಂದು ತಿಳಿಸಲಾಗಿದೆ.

ಕಮೀಷನರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ದೂರವಾಣಿ ಸಂಖ್ಯೆಗಳನ್ನೂ ನಮೂದಿಸಬೇಕು. 20 ಜೂನ್ 2023ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಮರಳು ಮಾಫಿಯಾ ತಡೆಯಲು ಮುಂದಾದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ”ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ” ಎಂದು ತಿಳಿಸಿದರು.

ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರು ಬರಬಾರದು

”ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್​​ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು. ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ” ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...