Homeಮುಖಪುಟಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

- Advertisement -
- Advertisement -

ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಝಾನ್ಸಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಚಲ್ ಅರ್ಜರಿಯಾ ಮತ್ತು ಪೂರ್ಗೇಶ್ ಅಮರಿಯಾ ಬಂಧಿತ ಆರೋಪಿಗಳು.

ಮಾರ್ಚ್ 19 ರಂದು ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆದ ಕಿರುಕುಳದ ಬಗ್ಗೆ ‘ಈ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ; ಜೊತೆಗೆ ಸನ್ಯಾಸಿನಿಯರನ್ನು ಬಿಟ್ಟಿದ್ದಾರೆ’ ಎಂಬುದಾಗಿ ಈ ಇಬ್ಬರು ಝಾನ್ಸಿ ರೈಲು ನಿಲ್ದಾಣದಲ್ಲಿ ಚರ್ಚಿಸುತ್ತಿದ್ದರು. ಅಲ್ಲಿಯೇ ಗಸ್ತು ತಿರುಗುತ್ತಿದ್ದ ರೈಲ್ವೇ ಪೊಲೀಸರು ಈ ಕುರಿತು ಪ್ರಶ್ನಿಸಿದ್ದಾರೆ. ನಂತರ ಪೊಲೀಸರು ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಆರಂಭವಾಗಿದೆ. ನಂತರ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಆಕ್ರೋಶಗೊಂಡರು. ಹಾಗಾಗಿಯೇ ಇವರನ್ನು ಬಂಧಿಸಲಾಗಿದೆ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ತಿಳಿಸಿದ್ದಾರೆ.

ಬಂಧಿತರು ಝಾನ್ಸಿಯಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಎಂದು ತಿಳಿದುಬಂದಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಮಾರ್ಚ್‌ 19ರಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿತ್ತು. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ರೈಲು ನಿಲ್ದಾಣದಲ್ಲಿ ವಿಚಾರಣೆ ನಡೆಸಿ, ಸನ್ಯಾಸಿನಿಯರು ಮತಾಂತರ ನಡೆಸುತ್ತಿಲ್ಲ ಎಂಬುದು ಸಾಬೀತಾದ ನಂತರ ಅವರನ್ನು ಕಳುಹಿಸಲಾಗಿತ್ತು.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಆಗ್ರಹಿಸಿದ್ದರು.

ಆದರೆ ಈ ಕುರಿತು ಪ್ರತಿಕ್ರಿಯಿಸದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, “ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಮೇಲೆ ರೈಲು ಪ್ರಯಾಣದ ಸಂದರ್ಭದಲ್ಲಿ ಹಲ್ಲೆ ನಡೆದಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...