Homeಅಂತರಾಷ್ಟ್ರೀಯತೋಷಾಖಾನಾ ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ

ತೋಷಾಖಾನಾ ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಇಸ್ಲಾಮಾಬಾದ್ ಹೈಕೋರ್ಟ್‌ ತೀರ್ಪು ನೀಡಿದ್ದು, ಕೂಡಲೇ ಅವರನ್ನು ಬಂಧಿಸಲಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.

ತೋಷಾಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿರುವ ನ್ಯಾಯಾಲಯವು, ಮೂರು ವರ್ಷ ಜೈಲು ಶಿಕ್ಷೆ, ಒಂದು ಲಕ್ಷ ದಂಡ ಸಹಿತ ಐದು ವರ್ಷ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧ ಹೇರಿದೆ.

ಏನಿದು ತೋಷಾಖಾನಾ ಭ್ರಷ್ಟಾಚಾರ ಪ್ರಕರಣ?

ಈ ಶಿಕ್ಷೆಯು ಚುನಾವಣಾ ಆಯೋಗವು ನಡೆಸಿದ ತನಿಖೆಗೆ ಸಂಬಂಧಿಸಿದೆ. ಇದು 140 ಮಿಲಿಯನ್ ಪಾಕಿಸ್ತಾನಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ಸರ್ಕಾರಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಮಾಜಿ ಪ್ರಧಾನಿ ಇಮ್ರಾನ್ ತಪ್ಪಿತಸ್ಥರೆಂದು ಘೋಷಿಸಲಾಗಿದೆ.

2018 ರಿಂದ 2022 ರವರೆಗೆ ತನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಉಡುಗೊರೆಗಳನ್ನು ಅಕ್ರಮ ಮಾರಾಟದಿಂದ ಬಂದ ಆದಾಯದ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ ಎಂದು ಹೇಳಲಾಗಿದೆ.

ಶನಿವಾರ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅವರು ತಮ್ಮ ಅನುಯಾಯಿಗಳಿಗೆ “ಸದ್ದಿಲ್ಲದೆ ಮನೆಯಲ್ಲಿ ಕುಳಿತುಕೊಳ್ಳಬೇಡಿ” ಎಂದು ಮನವಿ ಮಾಡಿದರು. ಆದರೆ ಶಾಂತಿಯುತ ಪ್ರತಿಭಟನೆಯೇ ಮುಂದಿನ ದಾರಿ ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಒದಿ; ಜೆಡಿಎಸ್ ಬಿಜೆಪಿ ಕೂಡಿಕೆ: ರಾಜಕೀಯ ಪಕ್ಷವಾಗಿ ಸತ್ತು ಅಸ್ತಿತ್ವ ಉಳಿಸಿಕೊಳ್ಳುವ ಬಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...